Breaking News

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಗೂ ಸರ್ಕಾರದ ಕೆಲ ನೀತಿಗಳನ್ನ ವಿರೋಧಿಸಿ ಇಂದು ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

Spread the love

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಗೂ ಸರ್ಕಾರದ ಕೆಲ ನೀತಿಗಳನ್ನ ವಿರೋಧಿಸಿ ಇಂದು ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗ್ಗೆ 11ಕ್ಕೆ ಪ್ರಾರಂಭವಾಗುವ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್​ವರೆಗೂ ನಡೆಯಲಿದೆ. ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮೊದಲಾದವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಈಗಾಗಲೇ ಮುಂಜಾನೆಯೇ ಸಾವಿರಾರು ರೈತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ.

ರಾಜ್ಯದ ನಾನಾ ಜಿಲ್ಲೆಗಳಿಂದ ಬಂದಿರುವ 3 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ರೈತರು ಈ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಾರ್ಮಿಕರು ಮತ್ತು ದಲಿತ ಸಂಘಟನೆಗಳೂ ಕೂಡ ಪ್ರತಿಭಟನೆಯಲ್ಲಿ ರೈತರಿಗೆ ಬೆಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ರೈತರ ಪ್ರತಿಭಟನೆ ಹೆಚ್ಚು ತೀಕ್ಷ್ಣತೆ ಪಡೆದುಕೊಂಡಿದೆ.

ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆಗಳನ್ನ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗೆಯೇ, ಕೇಂದ್ರ ಸರ್ಕಾರದ ಕೃಷಿ ಮಸೂದೆಗಳಿಗೂ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಕೋವಿಡ್ ಸಂಕಷ್ಟ ಬಂದ ನಂತರ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ರೈತರ ಪ್ರತಿಭಟನೆ ಇದಾಗಿದೆ


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ