ಬೆಂಗಳೂರು : ಗೌರಿ ಗಣೇಶ ಹಬ್ಬದ ದಿನ ಕೂಡ ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ.ರಾಜ್ಯದಲ್ಲಿ ಇಂದು 7330 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಹೌದು, ರಾಜ್ಯದಲ್ಲಿ ಇಂದು 7330 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,71,876 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 93 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು. ಒಟ್ಟಾರೆ ಸಾವಿನ ಸಂಖ್ಯೆ 4615 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 2929 ಜನರಿಗೆ ಸೋಂಕು ಧೃಡವಾಗಿದ್ದು, 28 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ನಗರದಲ್ಲಿ ಸೋಂಕಿತರ ಸಂಖ್ಯೆ 1,05,749 ಕ್ಕೆ ಏರಿಕೆಯಾಗಿದೆ.