Breaking News

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್!

Spread the love

ಬೆಂಗಳೂರು : ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಕಡೂರು ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್ ಅವರು ಸಚಿವ ನಾರಾಯಣಗೌಡಅವರನ್ನು ಅನುದಾನದ ವಿಚಾರವಾಗಿ ಏಕವಚನದಲ್ಲೇ ನಿಂದಿಸಿದ್ದಾರೆ. ಬಳಿಕ ಮಾತಿನ ಚಕಮಕಿ ತಾರಕಕ್ಕೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

ತೋಟಗಾರಿಕೆ ಇಲಾಖೆಯಿಂದ ನೀಡಬೇಕಿದ್ದ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಶಾಸಕ ಬೆಳ್ಳಿ ಪ್ರಕಾಶ್ ಅವರು ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದ್ದು, ಮಾತಿನ ಚಕಮಕಿ ತಾರಕಕ್ಕೇರಿ ನಂತರ ಕುರ್ಚಿಗಳನ್ನು ತಳ್ಳಿ ಕೈ ಕೈ ಮಿಲಾಯಿಸುವ ಹಂತಕ್ಕೆ ಜಗಳವಾಡಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ