Breaking News
Home / new delhi / ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ರೈತ ಮಹಿಳೆ ಹಿಗ್ಗಾಮುಗ್ಗಾ ವಾಗ್ದಾಳಿ.

ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ರೈತ ಮಹಿಳೆ ಹಿಗ್ಗಾಮುಗ್ಗಾ ವಾಗ್ದಾಳಿ.

Spread the love

ಬೆಂಗಳೂರು: ಕರ್ನಾಟಕ ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದ ರಾಜ್ಯ ಸರ್ಕಾರದ ವಿರುದ್ಧ ಸಾವಿರಾರು ರೈತರು ಮತ್ತೊಮ್ಮೆ ಪ್ರತಿಭಟನೆಗೆ ಇಳಿದಿದ್ದಾರೆ. ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರೋ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ರೈತರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಜೊತೆಗೆ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ರೈತ ಮಹಿಳೆ ಮಂಜುಳಾ, ‘ಈ ಕಾಯ್ದೆಗಳು ರೈತರನ್ನು ಮುಗಿಸಲು ಹೊರಟಿವೆ. ರೈತರ ಕಷ್ಟ ಗೊತ್ತಿಲ್ಲದ ರಾಜಕಾರಣಿಗಳು ನಿಕೃಷ್ಟರು. ತಮಗಿಷ್ಟಬಂದಂತೆ ಕಾಯ್ದೆಗಳಿಗೆ ತಿದ್ದುಪಡಿ ತರಲು ಅವರು ಯಾರು..? ಹೆಲಿಕಾಪ್ಟರ್, ವಿಮಾನಗಳಲ್ಲಿ ಓಡಾಡುವ ರಾಜಕಾರಣಿಗಳಿಗೆ ರೈತರ ಕಷ್ಟವೇನು ಗೊತ್ತು..?

ರೈತರು ಅಜ್ಞಾನಿಗಳು ಅಂತ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಅವರು ಸಚಿವ ಸ್ಥಾನ ಸಿಕ್ಕಿಲ್ಲ ಅಂತ ಪಕ್ಷವನ್ನೇ ಬದಲಾಯಿಸುವ ಸಗಣಿ ತಿನ್ನುವ ವ್ಯಕ್ತಿ. ಕೂಡಲೇ ಅವರು ರೈತರ ಕ್ಷಮೆ ಕೇಳಬೇಕು. ಕ್ಷಮೆ ಕೇಳುವವರಿಗೆ ಬಿಡುವುದಿಲ್ಲ. ಹಸಿರು ಶಾಲು ಹಾಕಿಕೊಂಡು ಪ್ರಮಾಣವಚನ ಸ್ವೀಕರಿಸುವ ರಾಜಕಾರಣಿಗಳಿಗೆ ನಮ್ಮ ಕಷ್ಟ ಏನು ಗೊತ್ತು..? ಸರಿಯಾಗಿ ನ್ಯಾಯ ಕೊಡಿಸಿದ್ರೆ ಸರಿ, ಇಲ್ಲದಿದ್ರೆ ಅವರನ್ನು ವಿಧಾನಸೌಧದಿಂದ ಹೊರಗೆ ಎಳೆದು ತರ್ತೀವಿ’ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರ ಇತ್ತೀಚೆಗೆ ಕರ್ನಾಟಕ ಭೂ ಸುಧಾರಣಾ ಕಾಯ್ದೆ-1961ಕ್ಕೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ನಿರ್ಧಾರ ತೆಗೆದುಕೊಂಡಿದೆ. ಈ ಕಾಯ್ದೆಯಲ್ಲಿ ತರಲಾಗುವ ತಿದ್ದುಪಡಿ ಕೃಷಿ ಭೂಮಿಯನ್ನು ಖರೀದಿಸಲು ಕೃಷಿಯೇತರ ವ್ಯಕ್ತಿಗಳಿಗೂ ಅವಕಾಶವನ್ನ ಕಲ್ಪಿಸುತ್ತದೆ. ಜೊತೆಗೆ ಭೂಮಿ ಖರೀದಿ ಮಾಡಲು ಒಬ್ಬ ವ್ಯಕ್ತಿಗಿದ್ದ ಮಿತಿಯನ್ನು ತಿದ್ದುಪಡಿಯ ಮೂಲಕ ಹೆಚ್ಚಿಸಲಾಗಿದೆ. ಕರ್ನಾಟಕ ಭೂ ಸುಧಾರಣೆ ಕಾಯ್ದೆಯಲ್ಲಿದ್ದ ಸೆಕ್ಷನ್ 63 (a), 79 (a), (b) ಆನಿಂ (c) ಗಳು ತಿದ್ದುಪಡಿಗೆ ತಯಾರಾಗಿವೆ. ಸೆಕ್ಷನ್ 63 (a) ಪ್ರಕಾರ ಐದು ಜನ ಸದಸ್ಯರಿರುವ ಕುಟುಂಬಕ್ಕೆ ಭೂಮಿ ಖರೀದಿಸಲು 10 ಎಕರೆಯಗಳ ಮಿತಿಯಿತ್ತು ಅದನ್ನೀಗ 70 ಎಕರೆಗೆ ಹೆಚ್ಚಿಸಲಾಗಿದೆ. ಐದಕ್ಕಿಂತಲೂ ಹೆಚ್ಚಿನ ಸದಸ್ಯರಿರುವ ಕುಟುಂಬಕ್ಕೆ ಭೂಮಿ ಖರೀದಿಸಲು 20 ಎಕರೆಗಳ ಮಿತಿಯಿತ್ತು. ಅದನ್ನೀಗ 40 ಎಕರೆಗಳಿಗೆ ಹೆಚ್ಚಿಸಲಾಗಿದೆ.

ಸೆಕ್ಷನ್ 79 (a) ಪ್ರಕಾರ ಯಾವುದೇ ವ್ಯಕ್ತಿಯ ವಾರ್ಷಿಕ ಆದಾಯ ಕಾಯ್ದೆಯಲ್ಲಿ ಉಲ್ಲೇಖಿಸಿರುವ ಆದಾಯಕ್ಕಿಂತ ಹೆಚ್ಚಿದ್ದರೆ ಆ ವ್ಯಕ್ತಿಗೆ ಕೃಷಿ ಭೂಮಿ ಖರೀದಿಸಲು ಅವಕಾಶವಿರಲಿಲ್ಲ. 79(b) ಶೈಕ್ಷಣಿಕ ಸಂಸ್ಥೆಗಳು, ಧಾರ್ಮಿಕ ಹಾಗೂ ಸೇವಾ ಸಂಘಗಳು, ಕಂಪನಿ, ಸಹಕಾರ ಸಂಘಗಳಂತಹ ಸಂಸ್ಥೆಗಳು ಕೃಷಿ ಭೂಮಿ ಖರೀದಿಸುವುದನ್ನು ನಿರ್ಬಂಧಿಸಿತ್ತು. ಸೆಕ್ಷನ್ 79(c) ಮೇಲೆ ತಿಳಿಸಿದ ಸಂಘ-ಸಂಸ್ಥೆಗಳು ಕೃಷಿ ಭೂಮಿ ಖರೀದಿಸಿದರೆ ಅವರಿಗೆ ನಿಗದಿಯಾದ ದಂಡ ಮತ್ತು ಶಿಕ್ಷೆಗಳಿಗೆ ಸಂಬಂಧಪಟ್ಟಿತ್ತು. ಆದರೀಗ ಸರ್ಕಾರ ಈ ಸೆಕ್ಷನ್ನುಗಳನ್ನೇ ತೆಗೆದುಹಾಕುವ ಮೂಲಕ ಸುಮಾರು ೧೦೮ ಎಕರೆಗಳ ವರೆಗೆ ಕೃಷಿ ಭೂಮಿ ಖರೀದಿಸಲು ಅನುಮತಿ ನೀಡಿದೆ.

ಇನ್ನು ಎಪಿಎಂಸಿ ತಿದ್ದುಪಡಿ ಕಾಯ್ದೆಯಲ್ಲಿ ದಿನಸಿ ಪದಾರ್ಥಗಳ ಖರೀದಿ ಮತ್ತು ಮಾರಾಟಕ್ಕೆ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದೆ ಅಂತ ಸರ್ಕಾರ ಹೇಳ್ತಿದೆ. ಆದ್ರೆ ಖಾಸಗಿ ಕಂಪನಿಗಳಿಗೆ ಲಾಭ ಒದಗಿಸಿಕೊಡುವುದೇ ಈ ತಿದ್ದುಪಡಿ ಹಿಂದಿನ ಹುನ್ನಾರ ಎಂಬುದು ಕೆಲ ರೈತರ ಆರೋಪವಾಗಿದೆ.

ಎಪಿಎಂಸಿ ತಿದ್ದುಪಡಿ ಕಾಯ್ದೆ ಪ್ರಕಾರ ವ್ಯಾಪಾರಸ್ಥರು ಮತ್ತು ಕಂಪನಿಯವರು ನೇರವಾಗಿ ರೈತರ ಮನೆ ಬಾಗಿಲಿಗೆ ತೆರಳಿ ಬೆಳೆ ಖರೀದಿಸಬಹುದು. ರೈತರು ರಾಜ್ಯದ ಯಾವುದೇ ಜಿಲ್ಲೆಯ ಎಪಿಎಂಸಿಯಲ್ಲಿ ಬೆಳೆ ಮಾರಬಹುದು. ರೈತರು ಬೆಳೆದ ಉತ್ಪನ್ನಗಳ ಮಾರಾಟ ಸಂಬಂಧ ಆನ್‌ಲೈನ್‌ ಮಾರ್ಕೆಟಿಂಗ್‌ ಸೌಲಭ್ಯದ ಲಾಭ ಪಡೆಯಬಹುದು. ರಾಜ್ಯದ ಹಳೆಯ ಕಾಯ್ದೆಯಂತೆ ವರ್ತಕರು ನೇರವಾಗಿ ರೈತರ ಹೊಲದಿಂದ ಬೆಳೆ ಖರೀದಿಸುವಂತಿಲ್ಲ. ಇಂತಹ ಪ್ರಕರಣಗಳಲ್ಲಿ ವರ್ತಕರ ವಿರುದ್ಧ ಕಾನೂನು ಕ್ರಮಕ್ಕೆ ಅವಕಾಶವಿತ್ತು. ಇನ್ನು ಮುಂದೆ ಈ ಕ್ರಮ ಇರುವುದಿಲ್ಲ.

ರೈತ ಹೋರಾಟದ ಬಗ್ಗೆ ಕೃಷಿ ಸಚಿವ ಬಿ ಸಿ ಪಾಟೀಲ್​​ ಏನಂದ್ರ ಗೊತ್ತಾ ?#laxminews

Laxmi News 24×7 यांनी वर पोस्ट केले मंगळवार, २२ सप्टेंबर, २०२०

 

 


Spread the love

About Laxminews 24x7

Check Also

ರೇವಣ್ಣ ನಡವಳಿಕೆ ಸರಿಯಿಲ್ಲ, ಇಂಗ್ಲೆಂಡ್ ನಲ್ಲೂ ತಗಲಾಕೊಂಡಿದ್ದರು : ಮಾಜಿ ಸಂಸದ ಶಿವರಾಮೇಗೌಡ ಗಂಭೀರ ಆರೋಪ

Spread the loveಮಂಡ್ಯ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಸಂಕಷ್ಟದಲ್ಲಿದ್ದು ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ