Home / new delhi / ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ.

ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ.

Spread the love

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ.

5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ.

ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಪ್ರಚಾರ ಮತ್ತು ಮತದಾನದ ಕಾರ್ಯವಿಧಾನಗಳ ವಿವರಗಳೊಂದಿಗೆ ಪಂಚಾಯತ್ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗವು ಎಸ್‌ಒಪಿಗಳನ್ನು ನೀಡಿತ್ತು.

ಈ ವರ್ಷ ಮೇ ಮತ್ತು ಜೂನ್‌ನಲ್ಲಿ ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಕೊನೆಗೊಂಡರೂ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ.

 


Spread the love

About Laxminews 24x7

Check Also

ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ

Spread the love ರಬಕವಿ-ಬನಹಟ್ಟಿ: ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ. ಗ್ರಾಮೀಣ ಭಾಗದ ಜನರು ಕುಸ್ತಿಗೆ ಬಹಳಷ್ಟು ಮಹತ್ವ ನೀಡುತ್ತಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ