ಬೆಂಗಳೂರು : ರಾಜ್ಯ ಸರ್ಕಾರವು ಶುಶ್ರೂಷಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ಆರೋಗ್ಯ ಮಾದರಿಯ ಕೇಂದ್ರಗಳಲ್ಲಿ ವೈಯಕ್ತಿಕ ಸುರಕ್ಷಾ ಸಾಧನೆ ಕಿಟ್ ಧರಿಸಿ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರಿಗೆ ಮಾಸಿಕ 5 ಸಾವಿರ ರೂ. ಕೋವಿಡ್ ರಿಸ್ಕ್ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಶುಶ್ರೂಷಕರಿಗೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಪ್ರೋತ್ಸಾಹಧನ ನೀಡಬೇಕಿದೆ. ಪ್ರೋತ್ಸಹ ಧನವು ಇಲಾಖೆ ಅಡಿಯಲ್ಲಿನ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶುಶ್ರೂಷಕರಿಗೆ ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದೆ.
Laxmi News 24×7