ಬೆಂಗಳೂರು, – ಗಾಂಜಾ ಮಾರಾಟ ಮಾಡಲು ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ಶ್ರೀರಾಮಪುರ ಠಾಣೆ ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್(31), ವಿಕ್ಕಿ(23), ಪ್ರೇಮಕುಮಾರ್(21) ಬಂತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ, 2 ದ್ವಿಚಕ್ರ ವಾಹನ, 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ ಕಡೆಗೆ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದಲ್ಲಿ ನಿನ್ನೆ ಸಂಜೆ 5.30ರ ಸುಮಾರಿಗೆ ಮಾದಕವಸ್ತು ಗಾಂಜಾ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಶ್ರೀರಾಮಪುರ ಪೊಲೀಸರಿಗೆ ಲಭಿಸಿದೆ.
ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಸಿದ್ದಾರೆ.
ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಆರೋಪಿ ಕಾರ್ತಿಕ್ ಕಬ್ಬಿಣದ ವರ್ಕ್‍ಶಾಪ್‍ನಲ್ಲಿ ಕೆಲಸ ಮಾಡಿಕೊಂಡಿರುತ್ತಾನೆ.
ಈತನ ಮೇಲೆ 2019ನೇ ಸಾಲಿನಲ್ಲಿ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಮಾಡುವ ಎರಡು ಪ್ರಕರಣಗಳು ದಾಖಲಾಗಿರುತ್ತದೆ. ಈ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಬಂದು ಇದೇ ಕೃತ್ಯವನ್ನು ಮುಂದುವರೆಸಿಕೊಂಡು ಬಂದಿರುತ್ತಾನೆ.
ಮತ್ತೊಬ್ಬ ಆರೋಪಿ ವಿಕ್ಕಿ ಕೋರಮಂಗಲದ ಡಿಜೆಯೊಂದರಲ್ಲಿ ಮ್ಯೂಜಿಕ್ ಪ್ಲೇಯರ್‍ರಾಗಿ ಕೆಲಸ ಮಾಡಿಕೊಂಡಿರುತ್ತಾನೆ. ಆರೋಪಿ ಪ್ರೇಮಕುಮಾರ್ ಅಮೆಜಾನ್ ಕಂಪನಿಯಲ್ಲಿ ಡಿಲೆವರಿ ಬಾಯ್ ಕೆಲಸ ಮಾಡಿಕೊಂಡಿದ್ದು, ಕಾರ್ತಿಕ್ ಜೊತೆಯಲ್ಲಿ ಸೇರಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದಾಗಿ ತಿಳಿಸಿರುತ್ತಾನೆ.
ಆರೋಪಿ ಕಾರ್ತಿಕ್ ದಸಪಲಾ, ನಯಾಗರ್ ಜಿಲ್ಲೆ, ಒಡಿಶಾಕ್ಕೆ ರೈಲಿನಲ್ಲಿ ಹೋಗಿ ವ್ಯಕ್ತಿಯೊಬ್ಬರಿಂದ ಖರೀದಿಸಿ, ರೈಲಿನ ಮೂಲಕ ಗಾಂಜಾವನ್ನು ಬೆಂಗಳೂರಿಗೆ ತಂದು, ನಂತರ ಮೇಲ್ಕಂಡ ಆರೋಪಿಗಳು ಸೇರಿ ಹಂಚಿಕೊಂಡು ಶ್ರೀರಾಮಪುರ, ರಾಜಾಜಿನಗರ, ಸುಬ್ರಮಣ್ಯನಗರ, ಶೇಷಾದದ್ರಿಪುರಂ, ಬಸವೇಶ್ವರನಗರ ಪ್ರದೇಶಗಳಲ್ಲಿ ಮಾರಾಟ ಮಾಡುತ್ತಿದ್ದಾಗಿ ತಿಳಿಸಿದ್ದಾನೆ.
ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದ್ದು, ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.