Breaking News
Home / new delhi / ರಾಯಣ್ಣ ಪ್ರತಿಮೆ‌ ಸ್ಥಾಪನೆಯ ಹೋರಾಟಗಾರರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ – ಸಿದ್ದರಾಮಯ್ಯ

ರಾಯಣ್ಣ ಪ್ರತಿಮೆ‌ ಸ್ಥಾಪನೆಯ ಹೋರಾಟಗಾರರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ – ಸಿದ್ದರಾಮಯ್ಯ

Spread the love

ಬೆಂಗಳೂರು : ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ‌ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಳಗಾವಿ ಪೀರನವಾಡಿಯಲ್ಲಿನ ಘಟನೆ ಸಂಬಂಧ ಟ್ವಿಟ್ ಮಾಡಿರುವ ಅವರು, ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ,ಜಲ,ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ಏಪ್ರಿಲ್ 5ಕ್ಕೆ ಬರ್ತಿದೆ ಶರಣ್ ನಟನೆಯ ಹಾರರ್ ಸಿನಿಮಾ

Spread the love ಛೂ ಮಂತರ್’ ಸಿನಿಮಾ ರಿಲೀಸ್​ಗೆ ಒಂದು ತಿಂಗಳು ಬಾಕಿ ಇದೆ. ಹೀಗಾಗಿ, ಚಿತ್ರಕ್ಕೆ ಭರ್ಜರಿ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ