Breaking News

ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಪ್ರದರ್ಶನ

Spread the love

ನವದೆಹಲಿ: ಫೆಬ್ರವರಿ 3ರಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ. ಏಷ್ಯಾದ ಅತಿದೊಡ್ಡ ಏರೋ ಸ್ಪೇಸ್ ಪ್ರದರ್ಶನವಾಗಿರುವ ಏರೋ ಇಂಡಿಯಾವನ್ನು ಬೆಂಗಳೂರಿನಲ್ಲಿ ನಡೆಸಲು ರಕ್ಷಣಾ ಸಚಿವಾಲಯ ತೀರ್ಮಾನ ಕೈಗೊಂಡಿದೆ.

2021ರ ಫೆಬ್ರವರಿ 3 ರಿಂದ 5 ರವರೆಗೆ ಏರೋ ಇಂಡಿಯಾ ಪ್ರದರ್ಶನ ನಡೆಯಲಿದ್ದು ಫೆಬ್ರವರಿ 6, 7 ರಂದು ಸಾರ್ವಜನಿಕರಿಗೆ ಪ್ರವೇಶ ನೀಡಲಾಗುವುದು.

ದೆಹಲಿಯಲ್ಲಿ ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ.

 


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ