Home / ಜಿಲ್ಲೆ / ಬೆಂಗಳೂರು / ಜನತಾ ಕಾಲೋನಿಯಲ್ಲಿ ಚಾಕುವಿನಿಂದ ಚುಚ್ಚಿ ಚುಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಜನತಾ ಕಾಲೋನಿಯಲ್ಲಿ ಚಾಕುವಿನಿಂದ ಚುಚ್ಚಿ ಚುಚ್ಚಿ ವ್ಯಕ್ತಿಯ ಬರ್ಬರ ಕೊಲೆ

Spread the love

ಬೆಂಗಳೂರು ಗ್ರಾಮಾಂತರ: ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹರಿಯಾಣ ಮೂಲದ ಸಂಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ಸಂಜಯ್​ ಹರಿಯಾಣದಿಂದ ಆಗಮಿಸಿ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ.
 ಸಂಜಯ್​ ಕಮಾರ್​ನನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಚಾಕುವಿನಿಂದ ಹಲ್ಲೆಯಾದ ಬಳಿಕ ಸಂಜಯ್ ಮೆಟ್ಟಿಲುಗಳನ್ನು ಹತ್ತಿ ತನ್ನ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಆದ್ರೆ, ನಂತರ ರಕ್ತದ ಮಡುವಿನಲ್ಲೇ ಬಿದ್ದು ಒದ್ದಾಡಿ ಕೊನೆಯುಸಿರೆಳೆದಿದ್ದಾನೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್​ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ