ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ನರೇಂದ್ರ ಮೋದಿಯವರು ಅಪಾರ ದೂರದೃಷ್ಟಿಯನ್ನು ಇಟ್ಟುಕೊಂಡು ರಚಿಸಿರುವುದು ಭಾರತ ದೇಶದ ಶಿಕ್ಷಣ ವಲಯದಲ್ಲಿ ಇತಿಹಾಸ ಸೃಷ್ಟಿಸಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ 5ನೇ ದಿನದ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಒಂದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಅಪಾರ ದೂರದೃಷ್ಟಿಯನ್ನು ಇಟ್ಟುಕೊಂಡು ರಚಿಸಿದ್ದಾರೆ. ಇದು ಭಾರತ ದೇಶದ ಶಿಕ್ಷಣ ವಲಯದಲ್ಲಿ ಇತಿಹಾಸ ಸೃಷ್ಟಿಸಿದೆ. ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಹೊಸ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿ ಜಾರಿಗೊಳಿಸಿರುವುದು ನಿಜಕ್ಕೂ ಶ್ಲಾಗನೀಯ. ಬಹುಮುಖ್ಯವಾಗಿ ಈ ಹೊಸ ಶಿಕ್ಷಣ ನೀತಿ ದೇಶದ ನೆಲದ ಮೌಲ್ಯವನ್ನು ಹಾಗೂ ನೀತಿಯನ್ನು ಎತ್ತಿಹಿಡಿದಿದೆ ಹಾಗೂ ಆಂಗ್ಲ ಶಿಕ್ಷಣ ಪದ್ಧತಿಗೆ ತಿಲಾಂಜಲಿ ಹಾಡಿದೆ. ಶಿಕ್ಷಣ ಕ್ರಾಂತಿಯನ್ನೇ ಸೃಷ್ಟಿಸಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ.
ಮಕ್ಕಳ ಚಿಕ್ಕವಯಸ್ಸಿನಲ್ಲಿಯೇ ಅವರ ಕೌಶಲ್ಯ ಹಾಗೂ ಬುದ್ಧಿವಂತಿಕೆಯನ್ನು ಗಮನಿಸಿ ಈ ಒಂದು ಶಿಕ್ಷಣ ನೀತಿಯನ್ನು ರಚಿಸಲಾಗಿದೆ. ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯ ಕೊಡುವುದರ ಮೂಲಕ ಎಲ್ಲಾ ವರ್ಗದ ವಿಶೇಷವಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೂ ಹೆಚ್ಚಿನ ಒತ್ತನ್ನು ನೀಡಿರುವುದು ಈ ರೀತಿಯ ವಿಶೇಷ ಮುಖ್ಯಾಂಶಗಳಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್. ವೇಣುಗೋಪಾಲ್, ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎನ್. ಆರ್.ಶೆಟ್ಟಿ , ಪ್ರೊ. ಎಸ್.ಸಿ. ಶರ್ಮ ವಿಶ್ವವಿದ್ಯಾಲಯ ಧನಸಹಾಯ ಸದಸ್ಯ ಎಂಕೆ ಶ್ರೀಧರ್, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ರಿಷಿಕೇಶ್ ಹಾಗೂ ಬಯೋಕಾನ್ ಮಿಷನ್ ನಿರ್ದೇಶಕರಾದ ಪ್ರತಿಮಾ ರಾವ್ ಉಪಸ್ಥಿತರಿದ್ದರು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??