Breaking News

ಮೇಕೆದಾಟು ಯೋಜನೆ ; ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ಸಚಿವ ಜಾರಕಿಹೊಳಿ‌

Spread the love

ಮೇಕೆದಾಟು ಯೋಜನೆಯ‌ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ‌ ಮತ್ತು ಅರಣ್ಯ ‌ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ನವದೆಹಲಿಗೆ ತೆರಳಲಿದ್ದಾರೆ.

ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ
ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ ತಿಳಿಸಿದರು.

ಜಲಸಂಪನ್ಮೂಲ ಇಲಾಖೆಯಡಿಯಲ್ಲಿ‌ ಕಾರ್ಯ ನಿರ್ವಹಿಸುತ್ತಿರುವ ಕಾಡಾ ಹಾಗೂ ವಾಲ್ಮಿ ಸಂಸ್ಥೆಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಆಧುನಿಕ ಮತ್ತು ಸಾವಯವ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು‌ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Spread the love ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಾಡಿದ್ದು, ಕೂಡಲೇ ಪೊಲೀಸರು ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ