Breaking News
Home / ಅಂತರಾಷ್ಟ್ರೀಯ / ಮುಖ್ಯಮಂತ್ರಿ ಜೊತೆ ಸಭೆ; ಔಷಧ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಪಿರಮಲ್ ಗ್ರೂಪ್ ಆಸಕ್ತಿ..

ಮುಖ್ಯಮಂತ್ರಿ ಜೊತೆ ಸಭೆ; ಔಷಧ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಪಿರಮಲ್ ಗ್ರೂಪ್ ಆಸಕ್ತಿ..

Spread the love

ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಮುಖ್ಯಮಂತ್ರಿ ಜೊತೆ ಇಂದು ಪಿರಮಲ್ ಗ್ರೂಪ್‍ ಅಧ್ಯಕ್ಷ ಆನಂದ್ ಪಿರಮಲ್ ಅವರು ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು.

ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ.

ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ ಸರ್ಕಾರ ತೆರೆದಿಟ್ಟಿದೆ. ಕೋವಿಡ್ 19 ಸಾಂಕ್ರಾಮಿಕ ಹೊಸ ಸವಾಲುಗಳನ್ನು ತಂದೊಡ್ಡಿದೆ.

 ಇತ್ತೀಚೆಗೆ ಕರ್ನಾಟಕ ನೂತನ ಕೈಗಾರಿಕಾ ನೀತಿಯನ್ನು ಘೋಷಿಸಿದ್ದು, ಸುಸ್ಥಿರ ಮತ್ತು ಸಮಗ್ರ ಕೈಗಾರಿಕಾ ಅಭಿವೃದ್ಧಿಗೆ ಇದು ಸಹಕಾರಿಯಾಗಿದೆ ಎಂದರು. ಯೋಜನೆಗಳನ್ನು ಜಾರಿಗೆ ತರಲು ಇದ್ದ ಅಡೆತಡೆಗಳನ್ನು ನಿವಾರಿಸಿ, ಹೂಡಿಕೆಗಳನ್ನು ಆಕರ್ಷಿಸುತ್ತಿದೆ.

ಕೈಗಾರಿಕೆಗಳ ಸ್ಥಾಪನೆ, ಬೆಳವಣಿಗೆ ಹಾಗೂ ನಿರ್ವಹಣೆಗೆ ಪೂರಕ ವಾತಾವರಣವನ್ನು ರಾಜ್ಯ ಹೊಂದಿದೆ. ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಇತರೆಡೆಗಳಲ್ಲಿಯೂ ಕೈಗಾರಿಕೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಪೂರಕ ವ್ಯವಸ್ಥೆಗಳನ್ನು ಮಾಡಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಔಷಧ ತಯಾರಿಕಾ ವಲಯದಲ್ಲಿ ಕರ್ನಾಟಕದಲ್ಲಿ ಫಾರ್ಮಾ ರಫ್ತು, ಸಂಶೋಧನೆ ಮತ್ತು ಪ್ಯಾಕೇಜಿಂಗ್‍ನಲ್ಲಿ ಕರ್ನಾಟಕದಲ್ಲಿ ಅತ್ಯುತ್ತಮ ವಾತಾವರಣವಿದೆ. ಬಯೋಕಾನ್, ಜೆನೆಕಾ, ಸೇರಿದಂತೆ ಅನೇಕ ಪ್ರಖ್ಯಾತ ಸಂಸ್ಥೆಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಯಾವುದೇ ಸಮಸ್ಯೆ ಇದ್ದರೂ ಅದನ್ನು ತಕ್ಷಣವೇ ಬಗೆಹರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

ಪಿರಮಲ್ ಗ್ರೂಪ್‍ನ ಅಧ್ಯಕ್ಷ ಆನಂದ್ ಪಿರಮಲ್ ಮಾತನಾಡಿ, ತಮ್ಮ ಸಂಸ್ಥೆಗೆ ಔಷಧ ತಯಾರಿಕೆಯಲ್ಲಿ ಅಪಾರ ಅನುಭವವಿದೆ; ಜಾಗತಿಕ ಮಟ್ಟದಲ್ಲಿ ಶಾಖೆಗಳನ್ನು ಹೊಂದಿದೆ. ಔಷಧ ತಯಾರಿಕೆಯನ್ನು ಕರ್ನಾಟಕದಲ್ಲಿ ವಿಸ್ತರಿಸಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಒಂದೇ ದಿನದಲ್ಲಿ ಅಗತ್ಯ ಅನುಮೋದನೆ ನೀಡುತ್ತಿರುವುದನ್ನು ತಿಳಿದು ಹೂಡಿಕೆಗೆ ಹಾಗೂ ಪಾಲುದಾರಿಕೆಗೆ ಸಂಸ್ಥೆ ಉತ್ಸುಕವಾಗಿದೆ ಎಂದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಮಾತನಾಡಿ ರಾಜ್ಯದಲ್ಲಿ ಉದ್ಯಮಸ್ನೇಹಿ ಕೈಗಾರಿಕಾ ನೀತಿಯನ್ನು ಜಾರಿಗೆ ತಂದಿದ್ದು, ಕೈಗಾರಿಕಾ ಅಭಿವೃದ್ಧಿಗೆ ಎಲ್ಲಾ ಹಂತಗಳಲ್ಲಿಯೂ ಹೂಡಿಕೆಗೆ ಇರುವ ವಿಫುಲ ಅವಕಾಶಗಳ ಬಗ್ಗೆ ವಿವರಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ