Breaking News

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲ್ವೆ ಟಿಕೆಟ್ ಕೌಂಟರ್ ನಾಳೆಯಿಂದ ಕಾರ್ಯಾರಂಭ, ಎಲ್ಲೆಲ್ಲಿ?

Spread the love

ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೇ ವಿಭಾಗವು ಹೆಚ್ಚುವರಿ ಟಿಕೆಟ್​ ಕಾಯ್ದಿರಿಸುವ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಿದೆ. ಇವೆಲ್ಲಾ ಕೇಂದ್ರಗಳು ನಾಳೆಯಿಂದ ಕಾರ್ಯಾರಂಭವಾಗಲಿದೆ.

ಬೆಂಗಳೂರಿನಲ್ಲಿ ಮಲ್ಲೇಶ್ವರ, ಚಿಕ್ಕಬಾಣಾವರ, ಬಾಣಸವಾಡಿ, ಬೆಂಗಳೂರು ಪೂರ್ವ, ಕಾರ್ಮೆಲರಾಂ ಮತ್ತು ವೈಟ್​ಫೀಲ್ಡ್​ ರೈಲು ನಿಲ್ದಾಣಗಳಲ್ಲಿ ಈ ಹೆಚ್ಚುವರಿ ಕೌಂಟರ್​ಗಳನ್ನು ಕಾರ್ಯಾರಂಭಗೊಳಿಸಲಾಗುವುದು.

ಜೊತೆಗೆ, ಕುಪ್ಪಂ, ಪೆನುಕೊಂಡ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗೌರಿಬಿದನೂರು ಮತ್ತು ಮದ್ದೂರು ರೈಲ್ವೇ ನಿಲ್ದಾಣಗಳಲ್ಲಿ ಸಹ ಈ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಾಗುವುದು.

ಅಕ್ಟೋಬರ್​ 20 ರಿಂದ ನವೆಂಬರ್ 30ರವರೆಗೆ ಹಬ್ಬದ ವಿಶೇಷ ರೈಲುಗಳನ್ನು ಓಡಿಸಲು ಮಂಡಳಿಯು ಯೋಜಿಸಿರುವ ಹಿನ್ನೆಲೆಯಲ್ಲಿ ಮುಂಗಡ ಟಿಕೆಟ್​ ಕಾಯ್ದಿರಿಸಲು ಬೇಡಿಕೆ ಹೆಚ್ಚಾಗಬಹುದು ಅನ್ನೋ ಕಾರಣಕ್ಕೆ ಈ ಕೇಂದ್ರಗಳನ್ನು ಸ್ಥಾಪಿಸಲಿದೆ. ಎಲ್ಲಾ ಕೇಂದ್ರಗಳು ಲಾಕ್​ಡೌನ್​ ಸಮಯದ ಮುಂಚೆ ಇದ್ದ ಕೆಲಸದ ವೇಳೆಯ ಪ್ರಕಾರವೇ ಕಾರ್ಯ ನಿರ್ವಹಿಸಲಿದೆ. ಇದಲ್ಲದೆ, ಈ ಹಿಂದೆಯೇ ತೆರೆಯಲಾಗಿದ್ದ 15 ಟಿಕೆಟ್​ ಕಾಯ್ದಿರಿಸುವ ಕೇಂದ್ರಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂಬ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ