ಬೆಂಗಳೂರು : ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಕೊರೋನಾ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಟಿಕೆಟ್‌ಗಳಲ್ಲಿ ಮುದ್ರಿಸಿ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುತ್ತಿದೆ.
ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಪ್ರತಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ನಿಗಮ ನೀಡುವ ಪ್ರತಿ ಟಿಕೆಟ್‌ನಲ್ಲಿ ‘ಮಾಸ್ಕ್ ಧರಿಸಿ’, ‘ದೈಹಿಕ ಅಂತರ ಪಾಲಿಸಿ’, ‘ಕೈಗಳ ಸ್ವಚ್ಛತೆ ಕಾಪಾಡಿ’, ‘ಆರಂಭಿಕ ಕೋವಿಡ್-19 ಪರೀಕ್ಷೆಯು ಜೀವ ಉಳಿಸುತ್ತದೆ’ ಎಂದು ಮುದ್ರಿಸಿ ಟಿಕೆಟ್ ವಿತರಿಸುತ್ತಿದೆ.
ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್..!
ನಿಗಮವು ಈ ಹಿಂದೆಯೂ ಕೂಡ ಹಲವು ಬಾರಿ ಚುನಾವಣೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿಯಾನಗಳು, ಸ್ವಚ್ಛತೆ, ಪರಿಸರ ಸಂರಕ್ಷಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಟಿಕೆಟ್‌ನಲ್ಲಿ ಮುದ್ರಿಸಿ ಪ್ರಯಾಣಿಕರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸಿತ್ತು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News
Laxmi News 24×7