ಬೆಂಗಳೂರು : ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಡೆಸುತ್ತಿರುವ ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು.
ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಇಂದು ರೈತರ ಹಸ್ತಾಕ್ಷರ ಚಳುವಳಿ (ಸಹಿ)ಅಭಿಯಾನಕ್ಕೆ ಬೆಂಬಲ ನೀಡಿ ಮಾತನಾಡಿದರು.
ಕೇಂದ್ರ ಸರ್ಕಾರದ 3 ಕೃಷಿ ಸುಗ್ರಿವಾಜ್ಞೆಗಳಾದ ಕೃಷಿ ವ್ಯಾಪಾರ ಮತ್ತು ವಾಣಿಜ್ಯ ಸುಗ್ರಿವಾಜ್ಞೆ, ರೈತರ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಸುಗ್ರಿವಾಜ್ಞೆ, ಅಗತ್ಯ ಸರಕುಗಳ ಸುಗ್ರಿವಾಜ್ಞೆ ರೈತ ವಿರೋಧಿ ಮಸೂದೆಗಳಾಗಿವೆ.
ಈ ಮಸೂದೆಗಳನ್ನು ದೇಶಾದ್ಯಂತ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಜಾರಿಗಳಿಸಿದೆ. ಜನಾಭಿಪ್ರಾಯ ಸಂಗ್ರಹಿಸದೆ, ತಮಗೆ ಮನಸ್ಸಾ ಇಚ್ಛೆಯಂತೆ ಮಸೂದೆಯನ್ನು ಜಾರಿಗೊಳಿಸಿದೆ. ಇದು ಖಂಡನಿಯ ಎಂದು ವಿರೋಧ ವ್ಯಕ್ತ ಪಡಿಸಿದರು.
ಕಾಂಗ್ರೆಸ್ ಪಕ್ಷ ರೈತ ಪರ ಕೆಲಸ ಮಾಡುತ್ತದೆ. ಈಗ ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಸಹಿ ಅಭಿಯಾನ ನಡೆಸಲಾಗುತ್ತಿದೆ. ಈ ಸಹಿ ಅಭಿಯಾನದ ಸಂಗ್ರಹವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುವದು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಎಂದು ತಿಳಿಸಿದರು.