Breaking News
Home / new delhi / ಮುಂದಿನ ಮೂರು ದಿನ ರಾಜ್ಯಾದ್ಯಂತ ಭಾರೀ ಮಳೆ; ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್

ಮುಂದಿನ ಮೂರು ದಿನ ರಾಜ್ಯಾದ್ಯಂತ ಭಾರೀ ಮಳೆ; ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್

Spread the love

ಬೆಂಗಳೂರು  : ಈ ಬಾರಿಯ ಮಾನ್ಸೂನ್​ ಅಂದುಕೊಂಡ ಮಟ್ಟಿಗೆ ಮಳೆ ನೀಡಿಲ್ಲ. ಜೂನ್​-ಜುಲೈನಲ್ಲಿ ಕೊಂಚ ತಗ್ಗಿದ್ದ ಮಳೆ ಆಗಸ್ಟ್​ನಲ್ಲಿ ಉತ್ತಮವಾಗಿ ಸುರಿದಿತ್ತು. ಈಗ ಸೆಪ್ಟೆಂಬರ್​ ಆರಂಭದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ. ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದೆ. ಕುಮಟಾ, ಹೊನ್ನಾವರ, ಕುಂದಾಪುರ, ಉಡುಪಿ, ಮಂಗಳೂರು ಭಾಗದಲ್ಲಿ ನಿರಂತರವಾಗಿ ಮಳೆ ಅಬ್ಬರಿಸಲಿದೆ. ಇನ್ನು, ಗಾಳಿ ಕೂಡ ಜೋರಾಗಿರಲಿದೆ. ಹೀಗಾಗಿ, ಈ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ. ಇನ್ನು, ಮಲೆನಾಡು ಭಾಗದಲ್ಲೂ ಮಳೆಯ ಅಬ್ಬರ ಮುಂದುವರಿಯುಲಿದೆ. ಹೀಗಾಗಿ, ಈ ಭಾಗದಲ್ಲೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಸೆಪ್ಟೆಂಬರ್ 1 ಮತ್ತು 2 ರಂದು ವ್ಯಾಪಕ ಮಳೆ ನಿರೀಕ್ಷೆಯಿದೆ. ಹೀಗಾಗಿ, ಕರಾವಳಿ ಹಾಗೂ ಮಲೆನಾಡು ಭಾಗದ ನದಿ ಅಂಚಿನ ಗ್ರಾಮದ ಜನರು ಕೊಂಚ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಶಿವಮೊಗ್ಗ , ಹಾಸನ, ಚಾಮರಾಜನಗರ , ಮೈಸೂರು , ಮಂಡ್ಯ , ರಾಮನಗರ , ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ಇದರಿಂದಾಗಿ ದಕ್ಷಿಣ ಒಳನಾಡಿನಲ್ಲಿ ಕೂಡ ಸೆ. 1 ರಿಂದ 3 ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಿದೆ‌ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿಕೆ ನೀಡಿದ್ದಾರೆ‌.

ನಿನ್ನೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಶಿರಾಡಿ, ಕುಮಟಾ, ಅಂಕೋಲಾ ತಲಾ ಎಂಟು ಸೆಂ.ಮೀ ಮಳೆಯಾಗಿದ್ದು, ಗೋಕರ್ಣಾ, ಕದರಾದಲ್ಲಿ ತಲಾ ಏಳು ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ