Home / ಅಂತರಾಷ್ಟ್ರೀಯ / ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಂಗಳೂರು: ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಉಮರ್ ಖಾನ್, ಸೈದ್, ವಜೀಬ್, ಸಹಿಲ್‌ ಬಂಧಿಸಿತ ಆರೋಪಿಗಳು.

ಬಂಧಿತ ಖದೀಮರು OLX‌ನಲ್ಲಿ ಕಡಿಮೆ ಬೆಲೆಗೆ ವಾಹನಗಳ ಫೋಟೋ ಹಾಕುತ್ತಿದ್ದರು. ಅದನ್ನು ನೋಡಿ ವಾಹನ ಖರೀದಿಗೆ ಕರೆ ಮಾಡುತ್ತಿದ್ದ ಜನರಿಗೆ ತಾವು ಸೇನೆಯಲ್ಲಿದ್ದೇವೆ ಎಂದು ಸುಳ್ಳು ಹೇಳಿ ನಂಬಿಸಿ ಮೋಸ ಮಾಡುತ್ತಿದ್ದರು.

ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. ತಮ್ಮ ಖಾತೆಗೆ ಹಣ ಹಾಕಿಸಿಕೊಂಡು ಫೋನ್ ಸ್ವಿಚ್ ಆಫ್ ಮಾಡುತ್ತಿದ್ದರು. ದಕ್ಷಿಣ ಭಾರತದ ಹಲವು ರಾಜ್ಯದಲ್ಲಿ ಇದೇ ರೀತಿ ವಂಚನೆ ಮಾಡಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ