Breaking News

66 ಮಂದಿಯನ್ನು ಬಂಧಿಸಿ, ₹ 1 ಲಕ್ಷಕ್ಕೂ ಅಧಿಕ ಹಣವನ್ನು ವಶಪಡಿಸಿಕೊಂಡಿದ್ದಾರೆ.

Spread the love

ಕೂಡ್ಲಿಗಿ: ಎರಡು ಪ್ರತ್ಯೇಕ ಸ್ಥಳಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ ಕೂಡ್ಲಿಗಿ ಪೊಲೀಸರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 66 ಮಂದಿಯನ್ನು ಬಂಧಿಸಿ, ₹ 1 ಲಕ್ಷಕ್ಕೂ ಅಧಿಕ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿ ಜೂಜಾಟ ನಡೆದಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಬಳಿಕ ಕೂಡ್ಲಿಗಿ ಸಿಪಿಐ ಪಂಪನಗೌಡ ಹಾಗೂ ಪಿಎಸ್‍ಐ ತಿಮ್ಮಣ್ಣ ಎಸ್. ಚಮನೂರು ಸಿಬ್ಬಂದಿಯೊಂದಿಗೆ ದಾಳಿ ಕಾರ್ಯಾಚರಣೆ ನಡೆಸಿದರು.
ಅಲ್ಲಿ 60 ಮಂದಿಯನ್ನು ಬಂಧಿಸಿ ₹ 99,560 ವಶಪಡಿಸಿಕೊಂಡರು.

ಇನ್ನೊಂದಡೆ ಸಂಡೂರು ತಾಲ್ಲೂಕಿನ ಮಲ್ಲಾಪುರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಬಳಿ ಬಯಲಿನಲ್ಲಿ 6 ಮಂದಿಯನ್ನು ಬಂಧಿಸಿದ ಪಿಎಸ್‍ಐ ತಿಮ್ಮಣ್ಣ ಎಸ್. ಚಮನೂರು ₹ 2110 ವಶಪಡಿಸಿಕೊಂಡರು.

ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ