ಬೆಂಗಳೂರು: ಆಗಸ್ಟ್ 25ರಂದು (ಮಂಗಳವಾರ) ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಈ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್‌ಎಎಲ್‌ನಿಂದ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಬೆಳಿಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಿ ಸಮಾಲೋಚನೆ ನಡೆಸಲಿದ್ದಾರೆ.
ಕಾರ್ಯಕರ್ತೆಯರಿಗಷ್ಟೇ ಪ್ರೋತ್ಸಾಹಧನ ಕೊಡಬೇಕಿದೆ: ಎಸ್..ಟಿ. ಸೋಮಶೇಖರ್
11.15 ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ ಬಿಎಸ್‌ವೈ ಬಳಿಕ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಲಿದ್ದು ಮಧ್ಯಾಹ್ನ ಒಂದು ಗಂಟೆಗೆ ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ.
ಬಳಿಕ 2.30ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿ ಸಂಜೆ ಐದು ಗಂಟೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.