ಬೆಂಗಳೂರು: ಕೊರೊನಾ ವೈರಸ್ ಭಾದಿತ ಕಾರ್ಮಿಕರಿಗೆ ವೇತನ ಸಹಿತ 28 ದಿನಗಳ ಕಾಲ ರಜೆ ನೀಡಬೇಕೆಂದು ರಾಜ್ಯ ಸರ್ಕಾರ ಆದೇಶಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಸೂಕ್ತ ಕ್ರಮವಹಿಸುವ ಅಗತ್ಯಯಿದೆ. ಹೀಗಾಗಿ ಕೊರೊನಾ ವೈರಸ್ ಭಾದಿತ ಕಾರ್ಮಿಕರು ತಮ್ಮ ಹತ್ತಿರದ ಇಎಸ್ಐ ಆಸ್ಪತ್ರೆಗಳಿಗೆ ತೆರಳಿ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಬೇಕು. ಈ ರೀತಿ ಪ್ರಮಾಣ ಪತ್ರ ಪಡೆಯಲು ಬರುವ ಕಾರ್ಮಿಕರಿಗೆ ವೈದ್ಯಾಧಿಕಾರಿಗಳು ತುರ್ತು ಪರಿಶೀಲನೆ ನಡೆಸಿ ಕಡ್ಡಾಯವಾಗಿ ಪ್ರಮಾಣ ಪತ್ರ ನೀಡಬೇಕು. ಪ್ರಮಾಣ ಪತ್ರ ಪಡೆದ ಕಾರ್ಮಿಕರು ತಮ್ಮ ಸಂಸ್ಥೆಯ ಆಡಳಿತ ವರ್ಗಕ್ಕೆ ಸಲ್ಲಿಸಬೇಕು. ಆಡಳಿತವರ್ಗ ಪ್ರಮಾಣ ಪತ್ರವನ್ನು ಪರಿಗಣಿಸಿ ಕಡ್ಡಾಯವಾಗಿ ರಜೆ ಮಂಜೂರು ಮಾಡಬೇಕು ಎಂದು ಆದೇಶ ಹೊರಡಿಸಿದೆ.