Breaking News

ಕೊರೊನಾ ವೈರಸ್​ ಭಾದಿತ ಕಾರ್ಮಿಕರಿಗೆ 28 ದಿನಗಳ ವೇತನ ಸಹಿತ ರಜೆ

Spread the love

ಬೆಂಗಳೂರು: ಕೊರೊನಾ ವೈರಸ್​ ಭಾದಿತ ಕಾರ್ಮಿಕರಿಗೆ ವೇತನ ಸಹಿತ 28 ದಿನಗಳ ಕಾಲ ರಜೆ ನೀಡಬೇಕೆಂದು ರಾಜ್ಯ ಸರ್ಕಾರ ಆದೇಶಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೊರೊನಾ ವೈರಸ್​ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಸೂಕ್ತ ಕ್ರಮವಹಿಸುವ ಅಗತ್ಯಯಿದೆ. ಹೀಗಾಗಿ ಕೊರೊನಾ ವೈರಸ್​​ ಭಾದಿತ ಕಾರ್ಮಿಕರು ತಮ್ಮ ಹತ್ತಿರದ ಇಎಸ್​ಐ ಆಸ್ಪತ್ರೆಗಳಿಗೆ ತೆರಳಿ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಬೇಕು. ಈ ರೀತಿ ಪ್ರಮಾಣ ಪತ್ರ ಪಡೆಯಲು ಬರುವ ಕಾರ್ಮಿಕರಿಗೆ ವೈದ್ಯಾಧಿಕಾರಿಗಳು ತುರ್ತು ಪರಿಶೀಲನೆ ನಡೆಸಿ ಕಡ್ಡಾಯವಾಗಿ ಪ್ರಮಾಣ ಪತ್ರ ನೀಡಬೇಕು. ಪ್ರಮಾಣ ಪತ್ರ ಪಡೆದ ಕಾರ್ಮಿಕರು ತಮ್ಮ ಸಂಸ್ಥೆಯ ಆಡಳಿತ ವರ್ಗಕ್ಕೆ ಸಲ್ಲಿಸಬೇಕು. ಆಡಳಿತವರ್ಗ ಪ್ರಮಾಣ ಪತ್ರವನ್ನು ಪರಿಗಣಿಸಿ ಕಡ್ಡಾಯವಾಗಿ ರಜೆ ಮಂಜೂರು ಮಾಡಬೇಕು ಎಂದು ಆದೇಶ ಹೊರಡಿಸಿದೆ.

 


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ