Breaking News

2.71 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಶಂಕುಸ್ಥಾಪನೆ

Spread the love

ಬೆಂಗಳೂರು : ಮುಧೋಳ್ ತಾಲ್ಲೂಕಿನ 2.71 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಮುಧೋಳ ತಾಲ್ಲೂಕಿನ ಸೊರಗಾಂವ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 15ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಹಲಗಲಿ ಗ್ರಾಮದಲ್ಲಿ 1.40 ಕೋಟಿ ರೂ ವೆಚ್ಚದ ಕಾಗವಾಡ- ಕಲಾದಗಿ ರಾಜ್ಯ ಹೆದ್ದಾರಿ ಕಾಮಗಾರಿ, ಮಾಚಕನೂರು ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 63ಲಕ್ಷ ರೂ ವೆಚ್ಚದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿ, ಬದ್ನೂರು ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 18ಲಕ್ಷ ರೂ ವೆಚ್ಚದ ಸಿಸಿ ರಸ್ತೆ, ಚೌಡಾಪುರ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 10ಲಕ್ಷ ರೂ ವೆಚ್ಚದ ಸಿಸಿ ರಸ್ತೆ, ಜಂಬಗಿ ಕೆ.ಡಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 25ಲಕ್ಷ ರೂ ವೆಚ್ವದ ಸಿಸಿ ರಸ್ತೆ, , ಬನ್ನೂರು ಗ್ರಾಮದಲ್ಲಿ 20ಲಕ್ಷ ರೂ‌ ವೆಚ್ವದಲ್ಲಿ ಪರಿಶಿಷ್ಟ ಪಂಗಡ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಡಿಸಿಎಂ ಶಂಕುಸ್ಥಾಪನೆ ‌ನೆರವೇರಿಸಿದರು.

ಈ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು.

ಈ ಯೋಜನೆಗಳನ್ನು ಸಾರ್ವಜನಿಕರು‌ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು. ಸಂದರ್ಭದಲ್ಲಿ ವಿವಿಧ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ