Breaking News

ಕೊರೊನಾದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಣಮುಖ

Spread the love

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಇದೀಗ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಗಳಲ್ಲಿ ದೇವರನ್ನು ಕಂಡೆ ಎಂದು ಟ್ವೀಟ್ ಮಾಡಿದ್ದಾರೆ.

 


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ