Breaking News

ನಟಿ ರಾಗಿಣಿಗೆ ಚಿತ್ರರಂಗದಿಂದ ನಿಷೇಧ?

Spread the love

ಬೆಂಗಳೂರು : ಡ್ರಗ್ಸ್‌ ಆರೋಪ ಸಾಬೀತಾದರೆ ನಟಿ ರಾಗಿಣಿ ಅವರಿಗೆ ಚಿತ್ರರಂಗದಿಂದ ನಿಷೇಧ ಶಿಕ್ಷೆ ಎದುರಾಗುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದ್ದು, ಡ್ರಗ್ಸ್‌ ಜಾಲದಲ್ಲಿ ರಾಗಿಣಿ ಪಾತ್ರ ಇರುವುದು ಸಾಕ್ಷ್ಯಸಮೇತ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ದೂರ ಇಡುವ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ.

ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಲು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್‌.ಜೈರಾಜ್‌ ನಿರಾಕರಿಸಿದ್ದು, ಈ ಹಂತದಲ್ಲಿ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.

ರಾಗಿಣಿ ದ್ವಿವೇದಿ ಸಿಸಿಬಿ ಕಸ್ಟಡಿ ಇಂದು ಮುಕ್ತಾಯ; ಮತ್ತೆ ಪೊಲೀಸ್ ವಶಕ್ಕೆ ಸಾಧ್ಯತೆ?

ಚಿತ್ರರಂಗದ ವ್ಯವಸ್ಥೆಯಿಂದ ದೂರ: ಚಲನಚಿತ್ರ ವಾಣಿಜ್ಯ ಮಂಡಳಿಯ ನಿರ್ಮಾಪಕರ ವಲಯದ ಉಪಾಧ್ಯಕ್ಷ ಉಮೇಶ್‌ ಬಣಕಾರ್‌ ‘ಕನ್ನಡಪ್ರಭ’ ಜತೆ ಮಾತನಾಡಿ, ‘ನಾವು ಯಾರನ್ನೂ ಬ್ಯಾನ್‌ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ.

ಯಾಕೆಂದರೆ ನಮಗೆ ಬ್ಯಾನ್‌ ಮಾಡುವ ಅಧಿಕಾರ ಇಲ್ಲ. ಆದರೆ, ಡ್ರಗ್ಸ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ಅವರ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ತನಿಖೆಯ ಹಂತದಲ್ಲಿ ನಾವು ಯಾವುದೇ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಲು ಆಗುವುದಿಲ್ಲ.

ನಡುರಾತ್ರಿ ಆಫ್ರಿನ್‌ ಪ್ರಜೆಗಳ ಡಿಜೆ ಪಾರ್ಟಿ: ಆಯೋಜಕನ ಬಂಧನ ..

ಒಂದು ವೇಳೆ ಅವರ ಮೇಲಿನ ಆರೋಪ ಸಾಬೀತಾದರೆ ಆಗ ಅವರ ಮೇಲೆ ಯಾವ ರೀತಿಯ ಕ್ರಮ ಕೊಗೊಳ್ಳಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆರೋಪಿ ಎಂದಾದ ಮೇಲೆ ಅವರೊಂದಿಗೆ ಹೊಸ ಸಿನಿಮಾಗಳನ್ನು ಮಾಡುವುದಿಲ್ಲ. ಸಿನಿಮಾ ಕಾರ್ಯಕ್ರಮಗಳಿಗೆ ಕರೆಯುವುದಿಲ್ಲ. ಆದರೆ, ಅವರು ಒಪ್ಪಿಕೊಂಡಿರುವ ಒಂದೆರಡು ಚಿತ್ರಗಳು ಇವೆ. ಆ ಚಿತ್ರಗಳಿಗೆ ಅವರು ಕೆಲಸ ಮಾಡಬಹುದು. ಉಳಿದಂತೆ ಅವರನ್ನು ಚಿತ್ರರಂಗದ ವ್ಯವಸ್ಥೆಯಿಂದ ದೂರ ಇಡುತ್ತೇವೆ. ಇದು ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರ’ಎಂದು ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

Spread the loveಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ