Breaking News

ಮಂಗಳವಾರ ಉತ್ತರ ಕರ್ನಾಟಕ ಭಾಗದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

Spread the love

ಬೆಂಗಳೂರು : ಭಾರೀ ಮಳೆಯಿಂದಾಗಿ ರಾಜ್ಯದ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಹಾನಿ ಸಂಭವಿಸಿದ್ದು, ಈ ಕುರಿತು ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ.

ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್‍ಎಎಲ್‍ನಿಂದ ಬೆಳಗಾವಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ.

ನಂತರ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ. ಮತ್ತೆ ಮಧ್ಯಾಹ್ನ 2.30ಕ್ಕೆ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದು, ಸಂಜೆ 5 ಗಂಟೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಸಿಎಂಗೆ ಸಾತ್ ಕೊಡಲಿದ್ದಾರೆ.


Spread the love

About Laxminews 24x7

Check Also

ದರ್ಶನ್‌ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ ಆರೋಪ: ಕಾರಾಗೃಹಕ್ಕೆ ಭೇಟಿ ನೀಡುವಂತೆ ಕಾರ್ಯದರ್ಶಿಗೆ ಕೋರ್ಟ್ ಸೂಚನೆ

Spread the love ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರು ಜೈಲಿನಲ್ಲಿ ತಮಗೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲವೆಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ