Breaking News

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ‌ ಮೂಡಿಸಿದೆ.

Spread the love

ಬೆಂಗಳೂರು:    ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ‌ ಮೂಡಿಸಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ‌,  ಅನುದಾನ ಹಂಚಿಕೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳೆದೆರಡು ದಿನದಿಂದ ಬೆಂಗಳೂರಿನಲ್ಲಿ ಸಾಕಷ್ಟು ಮಳೆ ಆಗುತ್ತಿದೆ.  ಪಕ್ಷದ ಶಾಸಕ‌ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲಿಯೂ ಸಾಕಷ್ಟು ಹಾನಿ ಆಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ 515 ಕೋಟಿಯ ಯೋಜನೆಗೆ ಅನುಮೋದನೆ ಕೊಟ್ಟಿದ್ದೆ.ಆದರೆ ಈಗಿನ ಸರ್ಕಾರ ಕೇವಲ 16 ಕೋಟಿ‌ ಮಾತ್ರ ನೀಡಿದೆ. ಹೀಗಾಗಿ ಮಳೆ ಅನಾಹುತ ನಿರ್ವಹಣೆ ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ