Breaking News

ಬೆಂಗಳೂರು, : ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ

Spread the love

ಬೆಂಗಳೂರು, : ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲೇ ಮುಗಿದಿದ್ದು, ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು.

ಆದರೆ ಕೊರೋನಾ ಭೀತಿಯಿಂದ ಮುಂದೂಡಲಾಗಿದ್ದು. ಇದೀಗ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ.

ಕೊರೋನಾ ಭೀತಿ ನಡುವೆಯೂ ಕರ್ನಾಟಕದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್

ಕಂದಾಯ ಇಲಾಖೆಗೆ ಮಹತ್ವದ ಸೂಚನೆ
ಕಂದಾಯ ಇಲಾಖೆಯಲ್ಲಿನ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಚುನಾವಣೆ ಆಯೋಗ ಬ್ರೆಕ್‌ ಹಾಕಿದೆ. ಗ್ರಾಮ ಪಂಚಾಯತಿ ಚುನಾವಣಾ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಸಿದ್ದತಾ ಕಾರ್ಯ, ಚುನಾವಣಾ ಪೂರ್ವಭಾವಿ ತಾಯಾರಿಗಳನ್ನ ಮಾಡಿಕೊಳ್ಳಬೇಕಿರುವುದರಿಂದ
ಕಂದಾಯ ಇಲಾಖೆಯಲ್ಲಿ ಯಾವುದೇ ಅಧಿಕಾರಿಗಳನ್ನ ಅಥಾವ ಸಿಬ್ಬಂದಿಗಳ ವರ್ಗವಾಣೆ ಮಾಡದಂತೆ ರಾಜ್ಯ ಸರ್ಕಾರ ಖಡಕ್ ಸೂಚನೆ ರವಾನಿಸಿದೆ.

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ತಾಲೂಕು ಹಾಗೂ ಜಿಲ್ಲೆಗಳಲ್ಲಿ ಪೂರ್ವಭಾವಿ ತಯಾರಿಗಳು ನಡೆಯುತ್ತಿವೆ. ಈ ಕಾರ್ಯಗಳಿಗೆ ತೊಡಕಾಗದಂತೆ 2020 ಸೆಪ್ಟೆಂಬರ್ 25ರ ನಂತರ ಕಂದಾಯ ಇಲಾಖೆಯ ಯಾವುದೇ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆ ಆದೇಶ ಹೊರಡಿಸದಂತೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಚುನಾವಣೆ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಗ್ರಾಮ ಪಂಚಾಯಿತಿ ಎಲೆಕ್ಷನ್: ಪಕ್ಷಗಳ ಗಲಾಟೆ ಮಧ್ಯೆ ಚುನಾವಣೆ ಆಯೋಗದಿಂದ ಪ್ರಕಟಣೆ

ಅಕ್ಟೋಬರ್‌ ಕೊನೆಯಲ್ಲಿ ಎಲೆಕ್ಷನ್..?
ರಾಜ್ಯದಲ್ಲಿ ಗ್ರಾಮ ಪಂಚಾಯತ್‌ ಚುನಾವಣೆ ಘೋಷಿಸುವ ಸಂಬಂಧ 2020ರ ಅಕ್ಟೋಬರ್‌ ಮೊದಲ ವಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಈಗಾಗಲೇ ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ಗೆ ತಿಳಿಸಿದೆ.

ಅದರಂತೆ ಈಗ ವಾರ್ಡ್‌ಗಳ ಮೀಸಲಾತಿಯನ್ನು ಪ್ರಕಟಿಸಲಾಗಿದ್ದು, ಚುನಾವಣೆ ಎಲ್ಲಾ ತಯಾರಿ ನಡೆಸಿದೆ. ಇತ್ತ ರಾಜಕೀಯ ನಾಯರು ಸಹ ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಮೀಸಲಾತಿ ಪ್ರಕಾರ ಅಭ್ಯರ್ಥಿಗಳ ಹುಡುಕಾಟ ನಡೆಸಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆದ್ರೆ ಅಕ್ಟೋಬರ್‌ನಲ್ಲೇ ಚುನಾವಣೆ ನಡೆಯುವುದು ಸಾಧ್ಯತೆಗಳು ಹೆಚ್ಚಿವೆ. ಅದಕ್ಕೆ ಕೊರೋನಾ ಮಾರ್ಗಸೂಚಿಗಳನ್ನ ಸಹ ಈಗಾಗಲೇ ಕೇಂದ್ರ ಚುನಾವಣೆ ಆಯೋಗ ಪ್ರಕಟಿಸಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಶಾಸಕ‌ ವಿರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ

Spread the loveರಾಯಚೂರು: ಕಾಂಗ್ರೆಸ್ ಶಾಸಕ‌ ವಿರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ