ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷರು, ತಮಿಳುನಾಡು, ಪೊಂಡಿಛೆರಿ ಮತ್ತು ಗೊವಾ ರಾಜ್ಯಗಳ ಎಐಸಿಸಿ ಉಸ್ತುವಾರಿಯಾಗಿ ನೇಮಕಗೊಂಡ ದಿನೇಶ ಆರ್. ಗುಂಡುರಾವ ಅವರ ನಿವಾಸಕ್ಕೆ ತೆರಳಿ ಅವರನ್ನು ಬುದವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸನ್ಮಾನಿಸಿ ಶುಭ ಹಾರೈಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಂಘಟನಾ ಚತುರರುರಾದ ದಿನೇಶ ಗುಂಡುರಾವ ಅವರು ಈ ಮೂರು ರಾಜ್ಯಗಳಿಗೆ ಎಐಸಿಸಿ ಉಸ್ತುವಾರಿಯಾಗಿರುವುದು ಪಕ್ಷಕ್ಕೆ ಬಲ ಬಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹರ್ಷ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ ಮತ್ತು ಬೆಳಗಾವಿ ಗ್ರಾಮೀಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ ಹನಮನ್ನವರ ಇದ್ದರು.
Laxmi News 24×7