Breaking News

ಭಾಷೆಗಳ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಅವಕಾಶ : ಹೆಚ್ಡಿಕೆ ಬೇಸರ

Spread the love

ಬೆಂಗಳೂರು, ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ.

 

 

ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ?

ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ?

 

ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ,ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ.

ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ