Breaking News

CCB List ನಲ್ಲಿ ಮುಂದಿನ ಹೆಸರುಗಳು ಆ ಹಿರಿಯ ಸ್ಟಾರ್ ನಟ ಮತ್ತು ಸೋದರರದ್ದು!

Spread the love

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ನಟ ನಟಿಯರ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಇನ್ನೂ ಕೆಲವರ ಮೇಲೆ ಕಣ್ಣು ನೆಟ್ಟಿದೆ.

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ಟಾರ್ ನಟ ಮತ್ತು ಸಹೋದರರು ಭಾಗಿಯಾಗಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಆ ಇಬ್ಬರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ. ಸ್ಯಾಂಡಲ್​ವುಡ್​ನ ಫ್ಯಾಮಿಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಈ ಸಹೋದರ ನಟರ ಪೈಕಿ 2017ರ ಗಾಂಜಾ ಪ್ರಕರಣ ಹಾಗೂ ಅಪಘಾತ ಸಂದರ್ಭದಲ್ಲಿ ಇದೇ ಕುಟುಂಬದ ಒಬ್ಬರನ್ನ ಜಯನಗರ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದರು.

 

ಆತನೂ ಕೂಡ 3 ದಶಕಗಳಿಂದ ಸ್ಯಾಂಡಲ್​ವುಡ್​ನಲ್ಲಿ ನಟನೆ ಮಾಡಿರುವವರೇ!
ಅಂದು ಸಾಕ್ಷಾಧಾರಗಳ ಕೊರತೆಯಿಂದ ಬಿಟ್ಟು ಕಳುಹಿಸಿದ್ದರು.

ನಟರ ತಂದೆಯೂ ಕೂಡ ಮೂರು ದಶಕಗಳಿಂದ ಸ್ಯಾಂಡಲ್​ವುಡ್​ನಲ್ಲಿ ನಟನೆ ಮಾಡಿರುವವರೇ! ಈಗ ಈ ನಂಟಿನಲ್ಲಿ ಸಹೋದರರ ಹೆಸರು ಕೂಡ ಪ್ರಮುಖವಾಗಿ ಕೇಳಿಬಂದಿದೆ. ಹಾಗಾಗಿ ಸಿಸಿಬಿ ಪೊಲೀಸರಿಂದ ಆ ಸ್ಟಾರ್ ನಟ ಹಾಗೂ ಸಹೋದರನಿಗೂ ನೋಟಿಸ್ ನೀಡುವ ಸಾಧ್ಯತೆಯಿದೆ.

ಈ ಇಬ್ಬರು ಸಹೋದರರು ನೈಟ್ ಪಾರ್ಟಿಯಲ್ಲಿ ಉದ್ಯಮಿಗಳು ಮತ್ತು ರಾಜಕಾರಣಿಗಳ ಮಕ್ಕಳ ಜೊತೆ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ.


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ