Breaking News

ʼಪ್ರಾಥಮಿಕ ಶಾಲಾ ಮಕ್ಕಳಿಗೆʼ ಮುಖ್ಯ ಮಾಹಿತಿ: ಶುರುವಾಗಲಿದೆ ʼಲೋಕಲ್‌ ಚಾನೆಲ್‌ ಕ್ಲಾಸ್‌ʼ..!

Spread the love

ಬೆಂಗಳೂರು: ಕೊರೊನಾ ಹವಾಳಿಯಿಂದ ಮನೆಯಲ್ಲಿಯೇ ಆನ್‌ಲೈನ್‌ ಕ್ಲಾಸ್‌ ಪಡೆಯುತ್ತಿರುವ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಸಚಿವ ಸುರೇಶ್‌ ಕುಮಾರ್‌ ಮತ್ತೊಂದು ವೇದಿಕೆಯನ್ನ ಸಿದ್ಧಪಡಿಸಿದ್ದು, 1 ರಿಂದ 8ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಲೋಕಲ್‌ ಕೇಬಲ್‌ ಟಿವಿ ಚಾನೆಲ್‌ಗಳ ಮೂಲಕ ತರಗತಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದಿದ್ದಾರೆ.

‘ಈಗಾಗಲೇ ಸಂವೇದಾ ಕಾರ್ಯಕ್ರಮದ ಮೂಲಕ ದೂರದರ್ಶನದ ಚಂದನವಾಹಿನಿಯಲ್ಲಿ 9 ಮತ್ತು 10ನೇ ತರಗತಿಯ ಮಕ್ಕಳಿಗೆ ಪಾಠ ಪ್ರವಚನ ನಡೆಸಲಾಗುತ್ತಿದೆ. ಇನ್ನು 1ರಿಂದ 8ನೇ ತರಗತಿಯ ಮಕ್ಕಳಿಗೆ ಸ್ಥಳೀಯ ಕೇಬಲ್‌ ಚಾನೆಲ್‌ಗಳ ಮೂಲಕ ತರಗತಿ ನಡೆಸಲು ಸಿದ್ಧತೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ. ಸಂವೇದಾ ತರಗತಿಗಳು ವಿದ್ಯಾಗಮದೊಂದಿಗೆ ಸಂಯೋಜನೆಗೊಂಡಿದ್ದು, ನಮ್ಮ ಇಲಾಖೆಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಸಹಾ ಲಭ್ಯವಿದೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಎಸ್‌.

ಸುರೇಶ್‌ ಕುಮಾರ್‌ ಮಾದ್ಯಮಗಳಿಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ