Breaking News

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

Spread the love

ಕೋಲಾರ: ಕೆರೆಯಲ್ಲಿಈಜಲು ಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ  ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇನ್ನೂ ಮೃತಪಟ್ಟ ಯುವಕರನ್ನು ರೋಣೂರು ಹೋಬಳಿ ವ್ಯಾಪ್ತಿಯ ಚಾಂಪಲ್ಲಿ ಗ್ರಾಮದ ನಿವಾಸಿಗಳಾದ ನರೇಂದ್ರ (25) ಹಾಗೂ ಚಂದನ್ (23) ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾದ ಹಿನ್ನೆಲೆ ಗ್ರಾಮದಲ್ಲಿ ಶೋಕ ಆವರಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇಬ್ಬರು ಸಹ ಅಣ್ಣ ತಮ್ಮಂದಿರಾಗಿದ್ದು, ಯಾವುದೆ ಪ್ರಕರಣ ದಾಖಲಾಗದ ಹಿನ್ನೆಲೆ ಮರಣೋತ್ತರ ಪರೀಕ್ಷೆ ನಡೆದಿಲ್ಲ. ಹಿರಿಯರ ಸಮ್ಮುಖದಲ್ಲಿ ಸಂಬAಧಿಕರು ಅಂತ್ಯಸಂಸ್ಕಾರ ಮಾಡಿದ್ದಾರೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ