Breaking News

ಅಣ್ಣನನ್ನು ಕೊಂದು ಹುಣಸೆಮರಕ್ಕೆ ನೇತು ಹಾಕಿದ ತಮ್ಮ……..

Spread the love

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ತಮ್ಮನೊಬ್ಬ ತನ್ನ ಸ್ವಂತ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಮಾವನೂರಿನಲ್ಲಿ ನಡೆದಿದೆ.

ಅಣ್ಣ ಮಂಜುನಾಥ ಸುಳ್ಳದ ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಕಲ್ಮೇಶ ಸುಳ್ಳದ ಎಂದು ಗುರುತಿಸಲಾಗಿದೆ. ಮೇ 9ರಂದು ಪಾನಮತ್ತನಾಗಿ ಮನೆಗೆ ಬಂದಿದ್ದ ಮಂಜುನಾಥ, ಆಸ್ತಿ ಮತ್ತು ಮನೆಯಲ್ಲಿ ತನಗೆ ಪಾಲು ಕೊಡುವಂತೆ ತಾಯಿ ಶಿವಲಿಂಗವ್ವ ಜೊತೆ ಜಗಳವಾಡಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ವಿಚಾರ ತಿಳಿದು ಕೆರಳಿದ ತಮ್ಮ ಕಲ್ಮೇಶ ಅಣ್ಣನ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಜಮೀನಿಗೆ ಹೊತ್ತುಕೊಂಡು ಹೋಗಿ, ಹುಣಸೆಮರಕ್ಕೆ ನೇತು ಹಾಕಿ, ಅಣ್ಣ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಂಬಿಸಲು ಯತ್ನಿಸಿದ್ದಾನೆ. ಆದರೆ ತಲೆಗೆ ಪೆಟ್ಟುಬಂದಿದ್ದ ಕಾರಣ ಇಂದು ಆತ್ಮಹತ್ಯೆ ಅಲ್ಲ ಕೊಲೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ