Breaking News

ಕುರಿಗಳಿಗೆ ನೀರು ಕುಡಿಸಲು ಕೆರೆಗೆ ಇಳಿದಿದ್ದ ಸಹೋದರರು ದುರ್ಮರಣ

Spread the love

ದಾವಣಗೆರೆ: ಕುರಿಗಳಿಗೆ ನೀರು ಕುಡಿಸಲು ಕೆರೆಗೆ ಇಳಿದಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹದಡಿ ಕೆರೆಯಲ್ಲಿ  ನಡೆದಿದೆ.

ಬಟ್ಲಕಟ್ಟೆ ಗ್ರಾಮದ ಕುರಿಗಾಯಿಗಳಾದ ದೇವರಾಜ್ ಹಾಗೂ ಶಿವರಾಜ್ ಮೃತ ದುರ್ದೈವಿಗಳು. ಇಬ್ಬರು ಮಧ್ಯಾಹ್ನ ಕುರಿಗಳಿಗೆ ನೀರು ಕುಡಿಸಿ ಮೈ ತೊಳೆಯಲು ಕೆರೆಗೆ ಇಳಿದಿದ್ದರು. ಈ ವೇಳೆ, ಅಯತಪ್ಪಿ ಕೆರೆಯಲ್ಲಿದ್ದ ಗುಂಡಿಗಳಿಗೆ ಇಬ್ಬರು ಬಿದ್ದಿದ್ದರು. ಮೇಲೇಳಲು ಸಾಧ್ಯವಾಗದೆ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಒಂದು ಮೃತದೇಹವನ್ನು ತೆಗೆದಿದ್ದು, ಮತ್ತೊಂದು ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ, ವ್ಯವಸ್ಥೆಯೊಳಗೇ ಹೋರಾಟ: ರಾಹುಲ್ ಗಾಂಧಿ

Spread the loveನವದೆಹಲಿ: ವಿರೋಧ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ. ಬದಲಾಗಿ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕವೇ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ