ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ

Spread the love

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲ್ಮಡ ಗ್ರಾಮದ ಹೊರವಲಯದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ (57) ಅವರ ಕೊಲೆ ನಡೆದಿದೆ.

ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ, ನಂತರ ಶವವನ್ನು ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದಾರೆ. ಕಲಬುರಗಿಯ ಆನಂದ್‌ ಕಾಲೋನಿ ನಿವಾಸಿಯಾದ ಜ್ಯೋತಿ, ಬೀದ‌ರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ವಾರಕ್ಕೊಮ್ಮೆ ಕಲಬುರಗಿಗೆ ಬಂದು ಹೋಗುತ್ತಿದ್ದ ಅವರು, ಕಲಬುರಗಿಯಿಂದ ಬೀದರ್ಗೆ ತೆರಳುವ ಮಾರ್ಗಮಧ್ಯೆ ಕಲ್ಮಡದಲ್ಲಿನಿನ್ನೆ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಎಲ್‌ಪಿಜಿ ಸಿಲಿಂಡರ್‌ಗೆ ರಾತ್ರಿಯಿಡೀ ಕ್ಯೂ ಕೂತ ಜನ

Spread the loveಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಲ್ಲಿ ʻಎನರ್ಜಿ ಎಮರ್ಜೆನ್ಸಿʼ  ಸೃಷ್ಟಿ ಆಗಿಬಿಡುತ್ತಾ ಅನ್ನೋ ಕಳವಳ ಹೆಚ್ಚಾಗ್ತಿದೆ. ಕೊರೊನಾ ಬಳಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ