ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್ ಸಿಂಗ್ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ಆನಂದ್ ಸಿಂಗ್ ಸಿಎಂ ಭೇಟಿಗೂ ಮೊದಲು ಮಾಜಿ ಸಿಎಂ ಬಿಎಸ್ವೈರನ್ನ ಭೇಟಿಯಾಗಲಿದ್ದಾರೆ.