ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಬ್ಬ ಮಾಜಿ ಶಾಸಕ ಮತ್ತು ಒಬ್ಬ ಹಾಲಿ ಶಾಸಕರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿಕೊಂಡಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಶೃಂಗೇರಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಎಂ.ಪಿ. ರೇಣುಕಾಚಾರ್ಯ ಮತ್ತು ಡಿ.ಎನ್. ಜೀವರಾಜ್ ಅವರು ಈ ಹಿಂದೆ ಬಿ ಎಸ್ ಯಡಿಯೂರಪ್ಪ ಅವರಿಗೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದರೊಂದಿಗೆ ಬಿಎಸ್ ಯಡಿಯೂರಪ್ಪ ಆಪ್ತರಿಗೆ ಸರ್ಕಾರದಲ್ಲಿ ಆಯಕಟ್ಟಿನ ಸ್ಥಾನಮಾನಗಳು ಮುಂದುವರಿಕೆ ಆದಂತಾಗಿದೆ.
Laxmi News 24×7