Breaking News

ಯಡಿಯೂರಪ್ಪ ದೆಹಲಿಗೆ ಒಯ್ದಿರುವ 6 ಬ್ಯಾಗ್ ರಹಸ್ಯವೇನು?

Spread the love

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ 6 ಬ್ಯಾಗ್ ಗಳ ಸಮೇತ ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಫ್ಲೈಟ್ ನಲ್ಲಿ 6 ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಆ ಬ್ಯಾಗ್ ಗಳಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಫೈಲ್ ಗಳಿವೆಯೇ ಅಥವಾ ಬೇರೆ ಏನಿದೆ ಎಂಬುದು ಗೊತ್ತಾಗಿಲ್ಲ. ಹೈಕಮಾಂಡ್ ಗೆ ಉಡುಗೊರೆ ತೆಗೆದುಕೊಂಡು ಹೋಗಿದ್ದಾರಾ? ಅಥವಾ ಬೇರೆ ಏನು ಕೊಡಲು ತೆಗೆದುಕೊಂಡು ಹೋಗಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಯಡಿಯೂರಪ್ಪನವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಅವರೊಬ್ಬರೇ ಭೇಟಿ ಮಾಡಿದ್ದಾರಾ ಅಥವಾ 6 ಬ್ಯಾಗ್ ಗಳೊಂದಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರಾ? ಈ ಬಗ್ಗೆ ಸಿಎಂ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ