Breaking News

ಜನಾರ್ದನ ರೆಡ್ಡಿ ಸಹಾಯಕ್ಕೆ ಹೋಗದ ಯಡಿಯೂರಪ್ಪ ವಿರುದ್ಧ ಗುಡುಗಿದ ಯತ್ನಾಳ್‌..!

Spread the love

ವಿಜಯಪುರ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನೋವಿದೆ. ಅದನ್ನ ಪಕ್ಷದ ಹಿರಿಯರು ಸರಿಪಡಿಸುತ್ತಾರೆ. ಒಂದು ಕಾಲದಲ್ಲಿ ರೆಡ್ಡಿ ಅವರಿಂದ ಬಿಜೆಪಿಗೆ ಅನಕೂಲಮಾಡಿಕೊಂಡು ಸಿಎಂ ಆಗಿದ್ದಾರೆ. ಯಾರು ರೆಡ್ಡಿ ಅವರ ಅನಕೂಲದಿಂದ ಸಿಎಂ ಆಗಿದ್ದಾರೋ ಅವರು ಜನಾರ್ದನ ರೆಡ್ಡಿ ಸಹಾಯಕ್ಕೆ ಹೋಗಬೇಕಿದೆ ಅಂತ ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ.

ವಿಜಯಪುರ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕ ಹಾಗೂ ಸಂಫುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಮಂಗಳವಾರ) ನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಯತ್ನಾಳ್‌ ಅವರು, ನಾನಂತೂ ಸಚಿವನಾಗಲು ಆಕಾಂಕ್ಷಿಯಲ್ಲಾ, ಯಾರಾದರೂ ಒಬ್ಬ ಒಳ್ಳೆಯವರನ್ನಾ ಉಸ್ತುವಾರಿ ಮಾಡಿ ಎಂದು ಬೊಮ್ಮಾಯಿ ಅವರಿಗೆ ಹೇಳಿದ್ದೇವೆ. ನನಗಂತೂ ವೈಯುಕ್ತಿವಾಗಿ ಸಚಿವನಾಗಬೇಕೆಂದಿಲ್ಲಾ, ಯಾರನ್ನಾದರೂ ಉಸ್ತುವಾರಿಯನ್ನಾಗಿ ಹಾಕಿದರೂ ಸ್ವಾಗತಿಸುತ್ತೇನೆ. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂಬ ನಿರೀಕ್ಷೆ ಮಾಡಲ್ಲ ಅಂತ ಯತ್ನಾಳ್‌ ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಸಚಿವ ಸಂಪುಟ ವಿಸ್ತರಣೆ ಮಾಡುವ ಆಸಕ್ತಿಯಿಲ್ಲ, ಸಂಪುಟ ವಿಸ್ತರಣೆ ವಿಚಾರದಲ್ಲಿ ಅಸಮಾಧಾನ ಭಿನ್ನಮತ ಬೇಡ, ಆರಾಮಾಗಿ ಆರು ತಿಂಗಳು ಕಳೆಯಬೇಕೆಂದುಕೊಂಡಿದ್ದಾರೆ ಅಂತ ಹೇಳಿದ್ದಾರೆ.

 

ಬಣಜಿಗ ಸಮಾಜದ ಬಗ್ಗೆ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಯತ್ನಾಳ್‌ ಅವರು, ಕೆಲವು ಜನರು ಉದ್ದೇಶಪೂರ್ವಕವಾಗಿಯೇ ಮಾಡುತ್ತಾರೆ. ಹೀಗೆಲ್ಲ ಮಾಡಿಕೊಂಡು ಹೋದರೆ ಅವರ ಜನಪ್ರತಿನಿಧಿಗಳು ಕಡಿಮೆಯಾಗುತ್ತಾರೆ. ಅದನ್ನು ಗಂಭೀರವಾಗಿ ತಿಳಿದುಕೊಳ್ಳಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಮುಂದೆ ಅವರ ಮಹಾನ್ ಮೇರುನಾಯಕನೂ ಔಟ್ ಆದರೆ ಆಶ್ಚರ್ಯವಿಲ್ಲ ಅಂತ ಯತ್ನಾಳ್‌ ತಿಳಿಸಿದ್ದಾರೆ.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ