Breaking News

ಬೆಳಗಾವಿಯ ಸಾಹುಕಾರ್ ಗೆ ಶಾಕ್ ನೀಡಿದ ಸಿಎಂ ಬಿಎಸ್ ವೈ

Spread the love

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ.

ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ ಭಾಗವಹಿಸಿದ್ದರು. ಅಚ್ಚರಿ ಏನೆಂದರೇ ಅವತ್ತೇ ಜಲ ಸಂಪನ್ಮೂಲ ಇಲಾಖೆ ಅಧೀನದಲ್ಲಿ ಬರುವ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ನಿರ್ದೇಶಕರ ಮಂಡಳಿಯ 16 ನೇ ಸಭೆಯನ್ನು ಮುಖ್ಯಮಂತ್ರಿಗಳು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದರು. ಈ ಜಲ ನಿಗಮಕ್ಕೆ ಅಧ್ಯಕ್ಷರು ಮುಖ್ಯಮಂತ್ರಿಗಳಾಗಿದ್ದರೆ, ಸಚಿವರಾದ ರಮೇಶ ಜಾರಕಿಹೊಳಿ ಉಪಾಧ್ಯಕ್ಷರು. ನಿರ್ದೇಶಕ ಮಂಡಳಿ ಸಭೆಯಲ್ಲಿ ಅಧ್ಯಕ್ಷರ ಜತೆಗೆ ಎಲ್ಲಾ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಉಪಾಧ್ಯಕ್ಷ ರಮೇಶ್ ಜಾರಕಿಹೊಳಿ ಪಾಲ್ಗೊಂಡಿರಲಿಲ್ಲ. ಜಲ ಸಂಪನ್ಮೂಲ ಇಲಾಖೆಯ ಭಾಗವಾಗಿರುವ ವಿಶ್ವೇಶ್ವರಯ್ಯ ಜಲ ನಿಗಮದ ಉಪಾಧ್ಯಕ್ಷರೇ ನಿರ್ದೇಶಕರ ಸಭೆಯಲ್ಲಿ ಪಾಳ್ಗೊಳ್ಳದಿರುವುದು ಅಚ್ಚರಿ ಮೂಡಿಸಿತ್ತು. ಈ ಸಭೆಗೆ ಗೈರು ಹಾಜರಾಗಿದ್ದವರ ಉಲ್ಲೇಖಿಸಿ ಇವರ ಅನುಪಸ್ಥಿತಿಯಲ್ಲಿ ಸಭೆ ನಡೆಯಿತು ಎಂದು ಅನುಪಸ್ಥಿತಿ ಅಧಿಕಾರಿಗಳಾದ ಶಾಲಿನಿ ರಜನೀಶ್, ಆರ್. ಚೆಲುವರಾಜು ಹೆಸರು ಉಲ್ಲೇಖಿಸಲಾಗಿತ್ತು.

ಅದೇ ಉಪಾಧ್ಯಕ್ಷ ರಮೇಶ್ ಜಾರಕಿಹೊಳಿ ಗೈರು ಹಾಜರಾಗಿದ್ದರೂ ಅವರ ಅನುಪಸ್ಥಿಇ ಬಗ್ಗೆ ಉಲ್ಲೇಖಿಸದೇ ಸಭೆ ನಡೆಸಲಾಗಿದೆ. ಮಾತ್ರವಲ್ಲ ವಿಶ್ವೇಶ್ವರಯ್ಯ ಜಲ ನಿಗಮದ ಕೋಟ್ಯಂತರ ರೂಪಾಯಿ ಕಾಮಗಾರಿಗಳಿಗೆ ಸಭೆ ಅನುಮೋದನೆ ನೀಡಿದೆ. ರಮೇಶ್ ಜಾರಕಿಹೊಳಿ ಅನುಪಸ್ಥಿತಿಯಲ್ಲಿ ಅವರದ್ದೇ ಇಲಾಖೆಯ ನಿಗಮದ ಸಭೆ ನಡೆಸಿ ಕಾಮಗಾರಿಗಳಿಗೆ ಅನುಮೋದನೆ ನೀಡಿರುವುದು ಚರ್ಚೆಗೆ ನಾಂದಿ ಹಾಡಿದೆ.

ಜಾರಕಿಹೊಳಿ ಶ್ರಮ: ಬಿಎಸ್ ವೈ ಹೆಸರು: ಇನ್ನು ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ಕೊಡಿಸಲು ಹದಿನೈದು ವರ್ಷದಿಂದ ಪ್ರಯತ್ನಿಸಲಾಗುತ್ತಿದೆ. ಆದರೆ, ಈವರೆಗೂ ಯಾವ ಸಚಿವರಿಂದಲೂ ಅದು ಸಾಧ್ಯವಾಗಿರಲಿಲ್ಲ. ರಮೇಶ್ ಜಾರಕಿಹೊಳಿ ಜಲಸಂಪನ್ಮೂಲ ಸಚಿವರಾದ ಬಳಿಕ ಪದೇ ಪದೇ ದೆಹಲಿಗೆ ಹೋಗಿ ಕೇಂದ್ರದ ನಾಯಕರ ಮೇಲೆ ಒತ್ತಡ ಹಾಕಿದ್ದರು. ಜಾರಕಿಹೊಳಿ ಅವರ ಒತ್ತಡಕ್ಕೆ ಮಣಿದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಭದ್ರಾ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ನೀಡಲು ಸಮ್ಮತಿ ಸೂಚಿಸಿದ್ದರು.

ಈ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಚಿವ ಸಂಪುಟದ ಅನುಮೋದನೆ ಪಡೆಯುವ ತೀರ್ಮಾನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೆಗೆದಕೊಂಡಿದ್ದಾರೆ. ಬೆಳಗಾವಿ ಸಾಹುಕಾರ್ ಅನುಪಸ್ಥಿತಿಯಲ್ಲಿ ಈ ತೀರ್ಮಾನ ತೆಗೆದುಕೊಂಡಿರುವುದು ಹಲವಾರು ಪ್ರಶ್ನೆ ಹುಟ್ಟುಹಾಕಿದೆ. ರಮೇಶ್ ಜಾರಕಿಹೊಳಿ ಅವರ ಪ್ರಾಮಾಣಿಕ ಪ್ರಯತ್ನದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ಸಿಗುತ್ತಿದ್ದು, ಯಡಿಯೂರಪ್ಪ ಅವರು ಅದನ್ನು ಹೈಜಾಕ್ ಮಾಡಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಜಲ ಸಂಪನ್ಮೂಲ ಸಚಿವರನ್ನು ದೂರ ಇಟ್ಟು ಇಂತಹ ತೀರ್ಮಾನ ತೆಗೆದುಕೊಂಡಿರುವುದು ಎಷ್ಟು ಸರಿ ? ಜಲ ಸಂಪನ್ಮೂಲ ಸಚಿವರೇ ಇಲ್ಲದೇ ಅಂತಹ ಮಹತ್ವದ ತೀರ್ಮಾನ ಮುಖ್ಯಮಂತ್ರಿಗಳು ತೆಗೆದುಕೊಂಡಿರುವ ಉದ್ದೇಶವೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.


Spread the love

About Laxminews 24x7

Check Also

ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದ ಪ್ರತಿಭಟನಾಕಾರರು!

Spread the loveಮಂಡ್ಯ, ನವೆಂಬರ್ 25: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕಾಡಅಂಕನಹಳ್ಳಿ ಗ್ರಾಮದಲ್ಲಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ