Home / ಅಂತರಾಷ್ಟ್ರೀಯ / ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್‍ವೈ ಆಕ್ರೋಶ

ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್‍ವೈ ಆಕ್ರೋಶ

Spread the love

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್‍ವೈ ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ