ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ

Spread the love

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಎಷ್ಟೇ ಪ್ರಯತ್ನಿಸಿದರು ವರಿಷ್ಟರು ಭೇಟಿಗೆ ಅವಕಾಶ ನೀಡುತ್ತಿಲ್ಲ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜ.17ರಂದು ರಾಜ್ಯಕ್ಕೆ ಅಮಿತ್​ ಶಾ ಅವರೇ ಆಗಮಿಸುತ್ತಾರೆ. ಅವರು ಬಂದ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಇನ್ನು ಇದೇ ವಿಚರಾಕ್ಕೆ ಇಂದು ದೆಹಲಿಗೆ ತೆರಳಬೇಕಿದ್ದ ತಮ್ಮ ಕಾರ್ಯಕ್ರಮ ರದ್ದಾಗಿರುವ ಕುರಿತು ಮಾತನಾಡಿದ ಅವರು, ಇಂದು ಮತ್ತು ನಾಳೆ ರಾಜ್ಯದ ಜಿಲ್ಲಾ ಪ್ರವಾಸ ಮಾಡುತ್ತಿದ್ದೇನೆ. ಹಲವು ಕಾರ್ಯಕ್ರಮ ಹಿನ್ನೆಲೆ ಪ್ರವಾಸವನ್ನು ಮೊಟಕುಗೊಳಿಸಲಾಗಿದೆ ಎಂದರು.

ಒಂದೆಡೆ 17 ಶಾಸಕರೂ ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದರೆ, ಇನ್ನೊಂದೆಡೆ ಬಿಜೆಪಿ ವರಿಷ್ಠರು ಸಿಎಂ ಭೇಟಿಗೂ ಅವಕಾಶ ನಿಡುತ್ತಿಲ್ಲ. ಒಟ್ಟಾರೆ ಯಡಿಯೂರಪ್ಪನವರಿಗೆ ಸಂಪುಟ ವಿಸ್ತರಣೆ ಕಗ್ಗಂಟಾಗಿ ಪರಿಣಮಿಸಿದೆ.
Advertisement


Spread the love

About Laxminews 24x7

Check Also

17 ಪಿಎಸ್‌ಐಗಳ ವರ್ಗಾವಣೆ

Spread the loveಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ