ಬೆಂಗಳೂರು (ಮೇ 17): ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್ಡೌನ್ ವಿಸ್ತರಿಸಲಾಗಿದೆ. 4ನೇ ಹಂತದ ಲಾಕ್ಡೌನ್ ಮಾರ್ಗಸೂಚಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಆಯಾ ರಾಜ್ಯಗಳಲ್ಲಿ ಲಾಕ್ಡೌನ್ ಸಡಿಲಗೊಳಿಸುವ ಸ್ವಾತಂತ್ರ್ಯವನ್ನು ಮುಖ್ಯಮಂತ್ರಿಗಳಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ.
ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಲಾಕ್ ಡೌನ್ 4.0 ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಅಧಿಕಾರಿಗಳ ಜೊತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಈ ಸಭೆಯ ಬಳಿಕ ರಾಜ್ಯದ ಲಾಕ್ಡೌನ್ ಸಡಿಲಿಕೆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಮೇ 19ರವರೆಗೆ 3ನೇ ಹಂತದ ಲಾಕ್ಡೌನ್ ಮುಂದುವರೆಸಲು ಆದೇಶ ನೀಡಿದೆ. 4ನೇ ಹಂತದ ಲಾಕ್ಡೌನ್ ರೂಪರೇಷೆಗಳ ಬಗ್ಗೆ ಇಂದು ನಿರ್ಧಾರವಾಗಲಿದೆ. ಈ ಸಭೆಯ ಬಳಿಕ ರಾಜ್ಯದ ಲಾಕ್ಡೌನ್ ಮಾರ್ಗಸೂಚಿ ಬಿಡುಗಡೆಯಾಗಲಿದೆ.