Breaking News

Lockdown News: ಲಾಕ್​​ಡೌನ್​​ ಸಡಿಲಿಕೆ: ಈ ಪ್ರದೇಶಗಳಲ್ಲಿ ಮಾತ್ರ ಅಂತರ ಜಿಲ್ಲೆ ಪ್ರಯಾಣಕ್ಕೆ ಪಾಸ್​ ಬೇಕಿಲ್ಲ – ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು(: ಕೊರೋನಾ ವೈರಸ್​​ ತಹಬದಿಗೆ ತರಲು ದೇಶಾದ್ಯಂತ ಮೂರನೇ ಬಾರಿಗೆ ಮೇ 17ನೇ ತಾರೀಕಿನವರೆಗೂ ಲಾಕ್​ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಾಳೆಯಿಂದ ಲಾಕ್​ಡೌನ್​​​​ ಸಡಿಲಗೊಳಿಸಿರುವ ರಾಜ್ಯ ಸರ್ಕಾರವೂ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಪ್ರಕಾರ ನಾಳೆಯಿಂದ ಗ್ರೀನ್​​ ಜೋನ್​ ವ್ಯಾಪ್ತಿಯಲ್ಲಿ ಬಹುತೇಕ ಸೇವೆಗಳು ಲಭ್ಯ ಇರಲಿವೆ. ಜತೆಗೆ ಸಾರ್ವಜನಿಕರ ಸಂಚಾರಕ್ಕೂ ಅವಕಾಶ ಮಾಡಿಕೊಡಲಾಗಿದೆ.

ರೆಡ್​​ ಜೋನ್​​​ ವ್ಯಾಪ್ತಿಗೆ ಬರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ರಾಮನಗರ,ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಅಂತರ ಜಿಲ್ಲಾ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದೆ. ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳಲು ಯಾವುದೇ ಪಾಸ್ ಅಗತ್ಯವಿಲ್ಲ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮಾತ್ರ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್ ಆದೇಶಿಸಿದ್ದಾರೆ.

ಇನ್ನು, ಲಾಕ್​ಡೌನ್​​ ಸಡಿಲಗೊಳಿಸಿದರೂ ಜನರು ಗುಂಪು ಸೇರುವುದರ ಮೇಲೆ ನಿಗಾ ಇಡಲು ಸರ್ಕಾರ ಮುಂದಾಗಿದೆ. ಲಾಕ್​​ಡೌನ್ ನಿಯಮ ಸಡಿಲವಾಗಿದೆ ಎಂದು ಮಾರುಕಟ್ಟೆ ಸೇರಿದಂತೆ ಇತರ ಪ್ರದೇಶಗಳಲ್ಲಿ ಜನರು ಗುಂಪು ಗೂಡುವಂತಿಲ್ಲ. ಲಾಕ್ ಡೌನ್ ಸಡಿಲವಾದರೂ ಆರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕು ಎಂದು ಸರ್ಕಾರ ಆದೇಶಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅಂಗಡಿಗಳ ಮುಂದೆ ಜನರು ಗುಂಪು ಸೇರಿದರೆ ಅಂಗಡಿ ಮಾಲೀಕರಿಗೆ ದಂಡ ಹಾಕಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿಯೂ ತೆಗೆದುಕೊಳ್ಳಲಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.


Spread the love

About Laxminews 24x7

Check Also

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

Spread the loveಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್ ಬೆಂಗಳೂರು, ನವೆಂಬರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ