Breaking News

ಪ್ರಧಾನಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ಸಿಎಂ ಬಿಎಸ್ವೈ ಪ್ರತಿಕ್ರಿಯೆ ಏನು ಗೊತ್ತೇ..!

Spread the love

ಬೆಂಗಳೂರು: ಕೊರೊನಾ ಲಾಕ್ ಡೌನ್ 4.0 ಆರಂಭಕ್ಕೆ ಮುನ್ನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಕಟಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿದಾರರಿಗೆ ಹೊಸ ಭರವಸೆ ಮತ್ತು ಚೈತನ್ಯವನ್ನು ತುಂಬಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ.

ಜತೆಗೆ, ಲೋಕಲ್ ಸೇ ಗ್ಲೋಬಲ್ ಎನ್ನುವ ಮೋದಿ ಅವರ ಘೋಷಣೆ ಐತಿಹಾಸಿಕ. ಲೋಕಲ್ ಉತ್ಪನ್ನಗಳಿಗೆ ವೋಕೋಲ್ (ಬಾಯಿ ಮಾತಿನ ಪ್ರಚಾರ) ಬಲವಿರಲಿ ಎಂಬುದು ನಮ್ಮ ಆದ್ಯತೆಯಾಗಬೇಕು ಎಂದು ಅವರು ಪ್ರತಿಪಾದಿಸಿರುವುದು ನವಭಾರತದ ಉದಯಕ್ಕೆ ನಾಂದಿ ಹಾಡಿದ್ದಾರೆಂದು ಡಿಸಿಎಂ ಅಭಿಪ್ರಾಯಪಟ್ಟಿದ್ದಾರೆ.

ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮತ್ತು ಸಬ್ ಕಾ ವಿಶ್ವಾಸ್ ತತ್ತ್ವದ ಮಹತ್ವವನ್ನು ಅವರು ಇಡೀ ಜಗತ್ತಿಗೇ ಸಾರಿ ಹೇಳಿದ್ದಾರೆ. ಹಾಗೆಯೇ ಇಡೀ ಜಗತ್ತೇ ಒಂದು ಪರಿವಾರ ಎಂದು ಹೇಳುವ ಮೂಲಕ ಪ್ರಧಾನಿ ಅವರು ಕೃಷ್ಣಂ ವಂದೇ ಜಗದ್ಗುರಂ ಎಂಬ ಕೃಷ್ಣತತ್ತ್ವವನ್ನು ಅವರೂ ಇಡೀ ಜಗತ್ತಿಗೇ ತಿಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಕೊರೊನ ನಂತರ ಹೊಸ ಭಾರತ, ಸ್ವಾವಲಂಭಿ ಭಾರತ ಉದಯವಾಗಲಿದೆ. ಸಶಕ್ತ ಭಾರತ ಉದಯವಾಗಲಿದೆ. ದೇಶದ ಪ್ರತಿಯೊಬ್ಬ ಪ್ರಜೆಯ ಆಶೋತ್ತರದಂತೆ ಪ್ರಧಾನಿ ಅವರು ಈ ಪ್ಯಾಕೇಜ್ ಪ್ರಕಟಿಸಿದ್ದಾರೆ. ದೇಶದ ರಕ್ತಗತ ಕಸುಬಾದ ಕೃಷಿಗೆ ಹಾಗೂ ಉತ್ಪಾದನಾ ಕ್ಷೇತ್ರಕ್ಕೆ ಪ್ಯಾಕೇಜ್ ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. ಇದನ್ನು ಪ್ರತಿಯೊಬ್ಬರು ಸ್ವಾಗತಿಸಬೇಕಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ದೇಶದ ಪ್ರತಿ ರಾಜ್ಯದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ ನಂತರವೇ ಪ್ರಧಾನಿ ಅವರು ಪ್ಯಾಕೇಜ್ ಘೋಷಿಸಿದ್ದಾರೆ. ಹೀಗಾಗಿ ಪ್ರತಿರಾಜ್ಯವೂ ಪ್ರಧಾನಿಯವರ ಆಶೋತ್ತರಗಳನ್ನು ಜನರಿಗೆ ತಲುಪಿಸಬೇಕು ಎಂಬುದು ನನ್ನ ಆಶಾ ಭಾವನೆಯಾಗಿದೆ ಎಂದು ಅಶ್ವತ್ಥನಾರಾಯಣ ಅವರು ಅಭಿಪ್ರಾಯಪಟ್ಟಿದ್ದಾರೆ.


Spread the love

About Laxminews 24x7

Check Also

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

Spread the loveಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್ ಬೆಂಗಳೂರು, ನವೆಂಬರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ