Breaking News

BIG-BREAKINGಸಾರ್ವಜನಿಕರ ಆಕ್ರೋಶಕ್ಕೆ ತಲೆಬಾಗಿದ ಸರ್ಕಾರ,ಬೈಕ್ ಸಂಚಾರ ಆದೇಶ ವಾಪಸ್,

Spread the love

ಬೆಂಗಳೂರು: ಏಪ್ರಿಲ್ 20ರ ನಂತರ ಬೈಕ್ ಸಂಚಾರಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ವಾಪಸ್ ತೆಗೆದುಕೊಂಡಿದೆ. ಸಾರ್ವಜನಿಕರ ಆಕ್ರೋಶಕ್ಕೆ ಸರ್ಕಾರ ಕೊನೆಗೂ ತಲೆಬಾಗಿದೆ.

ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ವಿಮರ್ಶಿಸಿಕೊಂಡಿದೆ. ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಿ ಸರ್ಕಾರ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.

1. ದ್ವಿ-ಚಕ್ರ ವಾಹನಗಳ (Two-Wheeler) ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ ನಿರ್ಧಾರವನ್ನು ಪುನರ್ ಪರಿಶೀಲಿಸಿ, ದ್ವಿ-ಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಲಾಕ್ಡೌನ್ ಸಮಯದಲ್ಲಿದ್ದಂತೆ ಯಥಾಸ್ಥಿತಿಯನ್ನು ಮುಂದುವರೆಸಲಾಗುತ್ತದೆ.
2. ಐ.ಟಿ.ಬಿ.ಟಿ. ಕ್ಷೇತ್ರದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕೊಟ್ಟು, ಉಳಿದಂತೆ ಮನೆಯಿಂದಲೇ ಕೆಲಸ (Work from Home) ನೀತಿಯನ್ನು ಮುಂದುವರೆಸಲಾಗುವುದು.

ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯಮಂತ್ರಿಗಳು, ಏಪ್ರಿಲ್ 20ರ ಲಾಕ್‍ಡೌನ್ ನಿಯಮಗಳಲ್ಲಿ ಸಡಿಲಿಕೆ ತಂದಿದ್ದರು. ಅವುಗಳಲ್ಲಿ ಯಾವುದೇ ಪಾಸ್ ಇಲ್ಲದಿದ್ದರೂ ದ್ವಿಚಕ್ರ ವಾಹನಗಳು ರಸ್ತೆಗಿಳಿಯಬಹುದು ಎಂದು ಸೂಚಿಸಿದ್ದರು. ಈ ನಿರ್ಣಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಸಾರ್ವಜನಿಕರು ಸರ್ಕಾರ ತನ್ನ ನಿರ್ಧಾರವನ್ನ ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದರು. ಪಬ್ಲಿಕ್ ಟಿವಿಯ ‘ಮನೆಯೇ’ ಮಂತ್ರಾಲಯ ಕಾರ್ಯಕ್ರಮಕ್ಕೆ ಕರೆ ಮಾಡಿದ್ದ ಜನರು ಬೈಕ್ ಸಂಚಾರಕ್ಕೆ ಅನುಮತಿ ನೀಡಿದ್ದು ಸರಿಯಲ್ಲ ಎಂದು ಕಿಡಿಕಾರಿದ್ದರು.


Spread the love

About Laxminews 24x7

Check Also

ರಾಜ್ಯ ಕಾಂಗ್ರೆಸ್​ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್​

Spread the loveಬೆಂಗಳೂರು: ಬಹಿರಂಗ ಹೇಳಿಕೆ ಯಾರು ಕೊಡಬಾರದು. ಇದು ನನ್ನ ಸೂಚನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ