Breaking News
Home / ಜಿಲ್ಲೆ / ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ಕಾಂಪ್ರೆಹೆನ್ಸಿವ್ ಆನ್‍ಲೈನ್ ಪ್ಲಾಟ್‍ಫಾರ್ಮ್ಗೆ ಸಿಎಂ ಚಾಲನೆ

ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ಕಾಂಪ್ರೆಹೆನ್ಸಿವ್ ಆನ್‍ಲೈನ್ ಪ್ಲಾಟ್‍ಫಾರ್ಮ್ಗೆ ಸಿಎಂ ಚಾಲನೆ

Spread the love

ಬೆಂಗಳೂರು, ಏ.20-ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ 2020ನೇ ಸಾಲಿನ ಸಿ.ಇ.ಟಿ ಮತ್ತು ನೀಟ್ ಪರೀಕ್ಷೆಗೆ ಆನ್‍ಲೈನ್ ಕೋಚಿಂಗ್ ತರಬೇತಿಗಳನ್ನು ನಡೆಸಲು ಕಿಯೋನಿಕ್ಸ್ ಸಂಸ್ಥೆಯ ಮುಖಾಂತರ ಅಭಿವೃದ್ಧಿಪಡಿಸಿರುವ ಕಾಂಪ್ರೆಹೆನ್ಸಿವ್ ಆನ್‍ಲೈನ್ ಪ್ಲಾಟ್‍ಫಾರ್ಮ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್19ರ ಸೋಂಕಿನಿಂದಾಗಿ ಜನ ಜೀವನದ ಜೊತೆಗೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದರು. ಶೈಕ್ಷಣಿಕ ತರಗತಿಗಳು ಹಾಗೂ ಕೋಚಿಂಗ್ ಮುಂದೂಡುವುದರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುತ್ತಾರೆ. ಸದ್ಯದ ಪರಿಸ್ಥಿತಿಯಲ್ಲಿ ಶಿ ಆನ್ ಲೈನ್ ಶಿಕ್ಷಣವೇ ಪರಿಹಾರ ಎಂದು ಭಾವಿಸಿ ಸಿಟಿ ಮತ್ತು ನೀಟ್ ವಿದ್ಯಾರ್ಥಿಗಳಿಗೆ ಕೋಚಿಂಗ್ ನೀಡಲು ತೀರ್ಮಾನಿಸಲಾಗಿದೆ.

ಇದರಿಂದ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವುದು ಸರ್ಕಾರದ ಉದ್ದೇಶ. ಆನ್ ಲೈನ್ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಮೂಲಕ ಆಂಡ್ರಾಯ್ಡ್ ನಲ್ಲಿ ಅಭಿವೃದ್ಧಿ ಪಡಿಸಿರುವ ಗೆಟ್ ಸೆಟ್ ಗೋ ಡಾಟ್ ಇನ್ ಮೂವ್ ಆ್ಯಪ್ ಮೂಲಕ ವಿದ್ಯಾರ್ಥಿಗಳು, ಸಿಇಟಿ ಮತ್ತು ನೀಟ್ ಪರೀಕ್ಷೆ ಯ ಸಾರಾಂಶ, ಅಣಕು ಪರೀಕ್ಷೆ ಸೇರಿದಂತೆ ಅಧ್ಯಯನಕ್ಕೆ ಪೂರಕ ಅಂಶಗಳನ್ನು ಪಡೆಯಬಹುದು. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.


Spread the love

About Laxminews 24x7

Check Also

ಗುಜರಾತ್: ಗೌತಮ್ ಅದಾನಿ ಸಮ್ಮುಖದಲ್ಲಿ ಲ್ಯಾಕ್ಟೋಫೆರಿನ್ ಘಟಕ ಉದ್ಘಾಟಿಸಿದ ಶರದ್ ಪವಾರ್

Spread the love ವಾಸ್ನಾ (ಗುಜರಾತ್): ಗುಜರಾತ್​ನಲ್ಲಿ ದೇಶದ ಮೊದಲ ಲ್ಯಾಕ್ಟೋಫೆರಿನ್ ಪ್ಲಾಂಟ್ ಎಕ್ಸ್‌ಮ್‌ಪವರ್​ಅನ್ನು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮುಖ್ಯಸ್ಥ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ