ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ಕಡಿಮೆಯಾಗದ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಜತೆಗೆ ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿ ಮತ್ತು ಮುಂದೆ ಕೈಗೊಳ್ಳಬೇಕಾದ ಮಹತ್ವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ಧಾರೆ.
ಬೆಂಗಳೂರು(ಏ.20): ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಚ್ 23ರಿಂದ ಏಪ್ರಿಲ್ 14ರತನಕ 21 ದಿನಗಳ ಕಾಲ ಮೊದಲ ಅವಧಿಯ ಲಾಕ್ಡೌನ್ ಜಾರಿಗೊಳಿಸಿತ್ತು. ಲಾಕ್ಡೌನ್ ಜಾರಿಯಲ್ಲಿದ್ದರೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯೇನು ಕಡಿಮೆಯಾಗಲಿಲ್ಲ, ಬದಲಿಗೆ ಏರುತ್ತಲೇ ಇತ್ತು. ಹಾಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ 21 ದಿನಗಳ ಲಾಕ್ಡೌನ್ ಅವಧಿಯನ್ನು ಮೇ 3ನೇ ತಾರೀಕಿನವರೆಗೂ ವಿಸ್ತರಣೆ ಮಾಡಿ ಆದೇಶಿಸಿದರು. ಇವರ ಸೂಚನೆ ಮೇರೆಗೆ ಲಾಕ್ಡೌನ್ ಅನ್ನು ಮುಂದಿನ ತಿಂಗಳು ಮೇ 3ರವರೆಗೂ ವಿಸ್ತರಿಸಿದೆ.
ಹೀಗಿರುವಾಗ ರಾಜ್ಯ ಸರ್ಕಾರವೂ ಎರಡನೇ ಲಾಕ್ಡೌನ್ ಅವಧಿಯಲ್ಲಿ ಏ. 20ರತನಕ ರೆಡ್ ಅಲರ್ಟ್ ಇರುವ ಹಾಟ್ಸ್ಪಾಟ್ ಪ್ರದೇಶಗಳಲ್ಲಿ ತೀವ್ರ ಅವಲೋಕನ ನಡೆಸಲಾಗಿದೆ. ಈ ಅವಲೋಕನದ ವೇಳೆ ಇನ್ನೂ ಕೊರೋನಾ ವೈರಸ್ ತಹಬದಿಗೆ ಬಂದಿಲ್ಲ. ಹಾಗಾಗಿಯೇ ಕರ್ನಾಟಕದ ಹಾಟ್ಸ್ಪಾಟ್ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ಗೃಹ ಸಚಿವಾಲಯ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ಕಡಿಮೆಯಾಗದ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಜತೆಗೆ ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿ ಮತ್ತು ಮುಂದೆ ಕೈಗೊಳ್ಳಬೇಕಾದ ಮಹತ್ವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ಧಾರೆ.
ಇತ್ತೀಚೆಗೆ ಮಾರಕ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಹೇರಲಾಗಿರುವ ಲಾಕ್ಡೌನ್ ಅನ್ನು ರಾಜ್ಯ ಸರ್ಕಾರ ಸ್ವಲ್ಪ ಸಡಿಲಗೊಳಿಸಿ ಆದೇಶಿಸಲಾಗಿತ್ತು. ಹಾಗಾಗಿ ಏಪ್ರಿಲ್ 20ರ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಶೇ. 33ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಿತ್ತು. ಅದರ ಜತೆಗೆ ದ್ವಿಚಕ್ರ ವಾಹನ ಓಡಾಟಕ್ಕೆ ಅನುಮತಿ ನೀಡುತ್ತೇವೆ ಎಂದು ಹೇಳಿ ಈ ನಿರ್ಧಾರದಿಂದ ಸರ್ಕಾರ ಹಿಂದೆಯೂ ಸರಿಯಿತು. ಈ ಬೆನ್ನಲ್ಲೀಗ ಈಗ ಇರುವ ಸ್ಥಿತಿಯಲ್ಲೇ ಲಾಕ್ಡೌನ್ ಮುಂದುವರಿಕೆಗೆ ಸರ್ಕಾರದ ಅಧಿಕೃತ ಆದೇಶ ಹೊರಡಿಸಿದೆ. ಏಪ್ರಿಲ್ 21ರವರಗೂ ಇದೇ ಸ್ಥಿತಿ ಮುಂದುವರೆಯಲಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲೂ ಈ ಸಭೆ ಮಹತ್ವದಾಗಿದೆ.