Breaking News
Home / ಜಿಲ್ಲೆ / ಮನೆಯಲ್ಲೇ ಸರಳವಾಗಿ ಹಬ್ಬ ಆಚರಿಸಿ; ಯುಗಾದಿ ಶುಭಾಶಯ ಕೋರಿದ ಸಿಎಂ ಬಿಎಸ್​​ವೈ

ಮನೆಯಲ್ಲೇ ಸರಳವಾಗಿ ಹಬ್ಬ ಆಚರಿಸಿ; ಯುಗಾದಿ ಶುಭಾಶಯ ಕೋರಿದ ಸಿಎಂ ಬಿಎಸ್​​ವೈ

Spread the love

ಬೆಂಗಳೂರು: ಎಲ್ಲೆಡೆ ಯುಗಾದಿ ಸಂಭ್ರಮ. ಆದರೆ, ಈ ಬಾರಿ ಯುಗಾದಿ ಹಬ್ಬಕ್ಕೆ ಕೊರೋನಾ ವೈರಸ್​ ಕರಿನೆರಳು ಬಿದ್ದಿದೆ. ಭೀಕರ ವೈರಸ್ನ​ ಭೀತಿ ಹೆಚ್ಚುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಕೇಂದ್ರ ಸರ್ಕಾರ 21 ದಿನ ಲಾಕ್​ಡೌನ್​ ಆದೇಶ ಹೊರಡಿಸಿದೆ. ಈ ಮಧ್ಯೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ರಾಜ್ಯದ ಜನತೆಗೆ ಯುಗಾಧಿ ಶುಭಾಶಯ ತಿಳಿಸಿದ್ದಾರೆ.
ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯ. ಹೊಸ ಸಂವತ್ಸರ ಸರ್ವರಿಗೆ ಶುಭವನ್ನು ತರಲಿ. ಕೊರೋನಾ ಸೋಂಕು ಹರಡುವಿಕೆ ತಡೆಗಟ್ಟಲು ಮನೆಗಳಲ್ಲಿಯೇ ಯುಗಾದಿಯ ಸಂಭ್ರಮದಿಂದ ಹಾಗೂ ಸರಳವಾಗಿ ಆಚರಿಸಿ,” ಎಂದು ಸಿಎಂ ಕರೆ ನೀಡಿದ್ದಾರೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ. ಮೃತರ ಸಂಖ್ಯೆ 11 ಕ್ಕೆ ಏರಿಕೆ ಆಗಿದೆ. ಭಾರತದಲ್ಲಿ ಒಂದೇ ದಿನ 3 ಮಂದಿ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 10ಕ್ಕೇರಿತ್ತು. ಮಾರ್ಚ್ 15ರಂದು ಅಮೆರಿಕದಿಂದ ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ 69 ವರ್ಷದ ವ್ಯಕ್ತಿಯೊಬ್ಬರಿಗೆ ಟಂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದರು. ಇದೀಗ ತಮಿಳುನಾಡಿನಲ್ಲಿ ಮತ್ತೋರ್ವ ವ್ಯಕ್ತಿ ಮೃತಪಡುವ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.


Spread the love

About Laxminews 24x7

Check Also

ಹಳೆಯ ದ್ವೇಷಕ್ಕೆ 200 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು!

Spread the love ದಾವಣಗೆರೆ: ಇಬ್ಬರು ವ್ಯಕ್ತಿಗಳ ನಡುವೆ ಇದ್ದ ಹಳೆಯ ದ್ವೇಷಕ್ಕೆ ತೋಟದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು ನಾಶವಾಗಿವೆ. ದಾವಣಗೆರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ